Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಪಾಳುಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ : 5 ಕೈಗುರುತು, ಇಬ್ಬರ ಕಾಲಲ್ಲಿ ಹಗ್ಗ , ಮತ್ತಷ್ಟು ಕುತೂಹಲ ಮೂಡಿಸುತ್ತಿರುವ ಕುರುಹುಗಳು…!

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.31 : ಚಳ್ಳಕೆರೆ ಗೇಟ್ ಬಳಿಯ ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿ ಪಂಜರ ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಸ್ಥಿಪಂಜರ ಸಿಕ್ಕ ಮನೆಯಲ್ಲಿ ಇಂದು ಐದು ಕೈಗುರುತು ಕೂಡ ಪತ್ತೆಯಾಗಿದೆ.

ಮನೆಯೊಳಗೆ ಸಿಗುತ್ತಿರುವ ಸಾಕ್ಷಿಗಳು ಇದು ಕೊಲೆಯೋ..? ಆತ್ಮಹತ್ಯೆಯೋ ಎಂಬ ಅನುಮಾನವನ್ನು ಹುಟ್ಟುಹಾಕಿದೆ. ಈ ಪಾಳು ಬಿದ್ದ ಮನೆಯಲ್ಲಿ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ, ಪತ್ನಿ‌ ಪ್ರೇಮಾ ರೆಡ್ಡಿ, ತ್ರಿವೇಣಿ ರೆಡ್ಡಿ, ಕೃಷ್ಣಾ ರೆಡ್ಡಿ ಹಾಗೂ ನರೇಂದ್ರ ರೆಡ್ಡಿ ವಾಸವಾಗಿದ್ದರು ಎನ್ನಲಾಗುತ್ತಿದೆ. ಈ ಐವರದ್ದೇ ಅಸ್ಥಿಪಂಜರ ಎಂಬ ಅನುಮಾನದ ಜೊತೆಗೆ ಈಗ ಐದು ಕೈಗಳ ಗುರುತು ಕೂಡ ಸಿಕ್ಕಿದೆ.

ಈ ಮೂಲಕ ಪೊಲೀಸರ ತನಿಖೆ ಚುರುಕುಗೊಂಡಿದೆ. ಹಾಲ್ ನಲ್ಲಿ ಇರುವ ಗೋಡೆಗಳ ಮೇಲೆ ಐದು ಕೈಗಳ ಗುರುತು ಪತ್ತೆಯಾಗಿದೆ. ಇದರ ಜೊತೆಗೆ ಎರಡು ಶವಗಳ ಕಾಲಲ್ಲಿ ಹಗ್ಗ ಪತ್ತೆಯಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮಾದರಿಯನ್ನು ಕಳುಹಿಸಲಾಗಿದೆ. ವರದಿ ಬಂದ ಮೇಲೆ ಇನ್ನಷ್ಟು ವಿಚಾರಗಳು ಹೊರ ಬರಲಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಈಗ ಆ ಐದು ಕೈ ಗುರುತು ಯಾರದ್ದು‌ ಎಂಬ ಪ್ರಶ್ನೆಗಳು ಮೂಡಿವೆ. ಮೊದಲೇ ಐದು ಶವಗಳು ಸಿಕ್ಕಿವೆ. ಈಗ ಐದು ಕೈಗುರುತುಗಳು ಸಿಕ್ಕಿರುವುದು ಆಶ್ಚರ್ಯವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...