Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಾತಿಗಣತಿ ವಿಚಾರ ; ಮುಸ್ಲಿಮರ ಒಲೈಕೆ ಮಾಡುತ್ತಿದೆಯಾ ಸರ್ಕಾರ..? ಸಿದ್ದರಾಮಯ್ಯ ಕೊಟ್ಟ ಉತ್ತರವೇನು..?

---Advertisement---

ಬೆಂಗಳೂರು; ಜಾತಿಗಣತಿ ವರದಿ ವಿಚಾರ ಸಾಕಷ್ಟು ಚರ್ಚೆಯಾಗಿತ್ತು. ಈಚೆಗಷ್ಟೇ ಸಚಿವ ಸಂಪುಟದಲ್ಲಿ ಜಾತಿಗಣತಿ ವರದಿ ಮಂಡನೆಯಾಗಿದೆ. ಆದರೆ ಸರ್ಕಾರ ಅಧಿಕೃತವಾಗಿ ರಿಲೀಸ್ ಮಾಡುವುದಕ್ಕೂ ಮುನ್ನವೇ ಅಂಕಿ ಅಂಶಗಳ ಲೀಸ್ಟ್ ಬಹಿರಂಗವಾಗಿದೆ. ಹೀಗೆ ವೈರಲ್ ಆದ ಅಂಕಿ ಅಂಶದ ಆಧಾರದ ಮೇಲೆ ಮುಸ್ಲಿಂ ಸಮುದಾಯವೇ ನಂಬರ್ ಒನ್ ಸ್ಥಾನದಲ್ಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದು, ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಇಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಧ್ಯಮದವರು ಜಾತಿಗಣತಿ ವರದಿ ಮೂಲಕ ಮುಸ್ಲಿಮರ ಒಲೈಕೆ ಮಾಡುತ್ತಿದ್ದಾರೆ ಎಂದು ವಿಪಕ್ಷಗಳು ಹೇಳುತ್ತಿವೆ ಎಂದು ಪ್ರಶ್ನೆ ಕೇಳಿದರು. ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು, 17 ನೇ ತಾರೀಕು ಕ್ಯಾಬಿನೆಟ್ ಮೀಟಿಂಗ್ ಇದೆ. ಅದೊಂದೆ ಸಬ್ಜೆಕ್ಟ್ ಅನ್ನ ಅಂದು ಚರ್ಚೆ ಮಾಡ್ತೇವೆ. ಚರ್ಚೆ ಮಾಡಿದ ಮೇಲೆ ಮಾತನಾಡಬೇಕು. ಶುಕ್ರವಾರ ಸಚಿವ ಸಂಪುಟದಲ್ಲಿ ಇದರ ಬಗ್ಗೆ ಚರ್ಚೆಯಾಗುತ್ತದೆ. ಆ ಬಳಿಕವಷ್ಟೇ ಇದರ ಬಗ್ಗೆ ಮಾತನಾಡಬೇಕು. ವರದಿಯ ಪ್ರತಿಯನ್ನು ಎಲ್ಲಾ ಸಚಿವರಿಗೂ ನೀಡಲಾಗಿದೆ. ಆ ಪ್ರತಿಯನ್ನು ಓದಿಕೊಂಡೇ ಎಲ್ಲರೂ ಬರಬೇಕು ಎಂದರು.

ಇದೆ ವೇಳೆ ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment