ಜಾತಿಗಣತಿಯ ಮರು ಸರ್ವೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

1 Min Read

ನವದೆಹಲಿ; ರಾಜ್ಯದಲ್ಲಿ ಜಾತಿಗಣತಿ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅದರಲ್ಲೂ ಇದು ತುಂಬಾ ವರ್ಷಗಳ ಹಳೆಯ ಸರ್ವೆ. ಇದನ್ನ ಒಪ್ಪುವುದಕ್ಕೆ ಸಾಧ್ಯವೇ ಇಲ್ಲ ಎಂದು ಸಾಕಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಹೈಕಮಾಂಡ್ ಸೂಚನೆ ಮೇರೆಗೆ ಮರು ಸರ್ವೇ ಮಾಡಿಸಲು ಸಿದ್ಧರಾಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ 10 ವರ್ಷದ ಹಳೆಯದಾಗಿರುವ ಕಾರಣ ನಿರ್ದಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಇದೆ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಇಂದಿನ ಸಭೆಯಲ್ಲಿ ಜಾತಿ ಜನಗಣತಿಯ ಬಗ್ಗೆ ಚರ್ಚೆ ಮಾಡಿದ್ದೇವೆ. ಜೂನ್ 12ನೇ ತಾರೀಖಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ನಿರ್ದಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲಾಗುವುದು ಎಂದಿರುವ ಕಾಂಗ್ರೆಸ್ ನಾಯಕರು 60, 80, 90 ದಿನಗಳ ಕಾಲ ಮಿತಿಯಲ್ಲಿ ವರದಿ ತರಲು ತೀರ್ಮಾನಿಸಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿ ಗಣತಿ ವರದಿಯು ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ಕಾಂಗ್ರೆಸ್ ಶಾಸಕರು, ಹಿರಿಯ ನಾಯಕರು ಈ ಬಾರಿ ಗಣತಿ ವರದಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ಅವರು ಮಹತ್ವದ ಸಭೆ ನಡೆಸಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಮರು ಸರ್ವೇ ಮಾಡಿಸಲು ಸೂಚನೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks