ಮಂಗಳೂರು, ಜನವರಿ 17: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ. ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು.

ದರೋಡೆಕೋರರನ್ನು ಕೂಡಲೆ ಪತ್ತೆ ಹಚ್ಚಲು ಸೂಚನೆ :
ಉಲ್ಲಾಳ್ ನಲ್ಲಿ ನಡೆದಿರುವ ದರೋಡೆ ಪ್ರಕರಣದ ಬಗ್ಗೆ ಮಾತನಾಡಿ ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










