Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾತಿ ಜನಗಣತಿ ವರದಿ | ಅಕ್ಟೋಬರ್ 16 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹಕ್ಕೊತ್ತಾಯ ಸಮಾವೇಶ : ಸಿ.ಟಿ.ಕೃಷ್ಣಮೂರ್ತಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಅ. 14 : ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆಗಾಗಿ ಒತ್ತಾಯಿಸಿ ದಿನಾಂಕ 16 ಅಕ್ಟೋಬರ್ 2024 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಹಕ್ಕೊತ್ತಾಯ ಸಮಾವೇಶ
ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ಸಿ.ಟಿ.ಕೃಷ್ಣಮೂರ್ತಿ ತಿಳಿಸಿದ್ದಾರೆ.

 

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಷಾ ಎಣಿಸುವ ಅಗತ್ಯವಿಲ್ಲ. ಸುಮಾರು 159 ಕೋಟಿ ರೂ.ಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು.ಅಕ್ಟೋಬರ್ 18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹೇಳಿರುವುದು ಸ್ವಾಗತಾರ್ಹ ಎಂದರು.

 

ಕರ್ನಾಟಕ 12ನೇ ಶತಮಾನದಲ್ಲೇ ಸಮಸಮಾಜವನ್ನು ಪ್ರತಿಪಾದಿಸಿದ ರಾಜ್ಯ. ಇಲ್ಲಿ ನಾಲ್ವಡಿ ಕೃಷÀ್ಣರಾಜ ಒಡೆಯರ್ ಕಾಲದಲ್ಲಿ ಮೈಸೂರು ಸಂಸ್ಥಾನದಲ್ಲಿ ಮೀಸಲಾತಿ ಜಾರಿ ಮಾಡಲಾಗಿತ್ತು. ದಿವಂಗತ ದೇವರಾಜ ಅರಸು ಅವರು `ಹಾವನೂರು ಆಯೋಗ’ ರಚಿಸಿ ಹಿಂದುಳಿದ ವರ್ಗಗಳ ಅಧ್ಯಯನಕ್ಕೆ ಮುನ್ನುಡಿ ಬರೆದರು. ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರು ಮೀಸಲಾತಿ ಮಿತಿಯನ್ನು ಶೇಕಡಾ 73ಕ್ಕೆ ಏರಿಸುವ ಪ್ರಯತ್ನ ಮಾಡಿದ್ದರು. ಅಂದಿನಿಂದಲೂ ಸಾಮಾಜಿಕ ನ್ಯಾಯದ ಪರವಾಗಿರುವ ಕರ್ನಾಟಕ ಈಗ ಜಾತಿ ಜನಗಣತಿ ಅಥವಾ ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸಮೀಕ್ಷಾ ವರದಿಯನ್ನು ತಯಾರಿಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

 

ಒಕ್ಕೂಟದ ರಾಜ್ಯ ಸಂಚಾಲಕರಾದ ಬಿ.ಟಿ.ಜಗದೀಶ್ ಮಾತನಾಡಿ, ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜೊತೆಗೆ ನಿರ್ಧಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ. ಜಾತಿ ಜನಗಣತಿಯ ವರದಿಯು ಹೊರಗೆ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ ಎಂದರು.

 

ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕಾಗಿರುವುದು ನ್ಯಾಯ ಸಮ್ಮತವಾಗಿದೆ. ಮೀಸಲಾತಿ ಪರಿಷ್ಕರಣೆ, ಜಾತಿಗಳನ್ನು ಹೊಸ ವರ್ಗಕ್ಕೆ ಸೇರಿಸುವುದು ಅಥವಾ ಕೈಬಿಡುವುದು ಎಲ್ಲಕ್ಕೂ ಸುಪ್ರೀಂ ಕೋರ್ಟ್ ಯಾವುದಾದರೂ ಸಾಂವಿಧಾನಿಕ ಸ್ಥಾನಮಾನ ಇರುವ ಆಯೋಗದ ದತ್ತಾಂಶವನ್ನು ಕೇಳುತ್ತದೆ. ಇದು ಮಂಡಲ್ ವರದಿ ಅನುಷÁ್ಠನವನ್ನು ಪ್ರಶ್ನಿಸಿದ್ದ ಅರ್ಜಿಯಿಂದ ಹಿಡಿದು ಹಲವಾರು ಪ್ರಕರಣಗಳಲ್ಲಿ ಕಂಡುಬಂದಿದೆ. ಆದುದರಿಂದ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡು ಬಿಡುಗಡೆ ಮಾಡಬೇಕಾಗಿರುವುದು ಅತ್ಯಾವಶ್ಯಕವಾಗಿದೆ ಎಂದು ಸರ್ಕಾರವನ್ನು ಆಗ್ರಹಿಸಿದರು.

 

ಮಹಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಮಂಜಪ್ಪ ಮಾತನಾಡಿ, ಬಡವರು, ರೈತರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದವರ ಬಗ್ಗೆ ಅಪಾರವಾದ ಕಾಳಜಿ ಇರುವ ಸದಾ ಸಾಮಾಜಿಕ ನ್ಯಾಯದ ಪರ ಇರುವ ಸಿದ್ದರಾಮಯ್ಯ ರವರು ಮುಖ್ಯಮಂತ್ರಿಯಾಗಿರುವುದರಿಂದ ಅವರು ರಾಜ್ಯದ ಏಳು ಕೋಟಿ ಜನರಿಗೂ ಅನುಕೂಲ ಆಗುವಂತಹ ಈ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆ ಮಾಡಬೇಕು. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ ಜನಗಣತಿ ನಡೆಸುವುದಾಗಿ ವಾಗ್ದಾನ ನೀಡಿತ್ತು ಎನ್ನುವುದನ್ನು ಮರೆಯಬಾರದು. ಕೊಟ್ಟ ಮಾತಿನಂತೆ ಈಗ ಜಾತಿ ಜನಗಣತಿ ವರದಿಯನ್ನು ಒಪ್ಪಿ ಬಿಡುಗಡೆ ಮಾಡಿ `ನಾವು ನುಡಿದಂತೆ ನಡೆಯುವವರು’ ಎನ್ನುವುದನ್ನು ಸಾಬೀತು ಮಾಡಬೇಕು ಎಂದು ಒತ್ತಾಯಿಸಿದರು.

ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಮಂಡಿಸಿದಾಗ ಕೆಲವರು ಆಕ್ಷೇಪ ಎತ್ತಿ ಅದನ್ನು ಒಪ್ಪಬೇಕೋ-ಬೇಡವೋ ಎಂದು ನಿರ್ಧರಿಸುವ ಅಭಿಪ್ರಾಯ ಸಂಪುಟ ಸಭೆಯ ಅಧಿಕಾರ. ಆದರೆ ಸಂಪುಟ ಸಭೆಯಲ್ಲಿ ಮಂಡಿಸಬಾರದು ಎಂಬುದು ಗೂಂಡಾ ಪ್ರವೃತ್ತಿ. ಸರ್ವಾಧಿಕಾರಿ ಧೋರಣೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಇಂತಹ ಜೊಳ್ಳು ಬೆದರಿಕೆಗೆ ತಲೆ ಕೆಡಿಸಿಕೊಳ್ಳದೆ ಮಾನ್ಯ ಸಿದ್ದರಾಮಯ್ಯ ನವರು ಮತ್ತು ಅವರ ಸಂಪುಟವು ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.

 

ಗೋಷ್ಟಿಯಲ್ಲಿ ಮಹಾ ಒಕ್ಕೂಟದ ಸಂಚಾಲಕರಾದಚ ದುರುಗೇಶಪ್ಪ ಪ್ರಸನ್ನ ಕುಮಾರ್, ನಗರಸಭೆಯ ಮಾಜಿ ಅಧ್ಯಕ್ಷ ನಿರಂಜನ ಮೂರ್ತಿ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಖಿಲ್ ಸೋಲಿನ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಫಸ್ಟ್ ರಿಯಾಕ್ಷನ್..!

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿ ಯೋಗೀಶ್ವರ್ ಗೆದ್ದು ಬೀಗಿದ್ದಾರೆ. ನಿಖಿಲ್ ಮೂರನೇ ಬಾರಿಗೂ ಸೋಲು ಕಂಡಿದ್ದಾರೆ. ಒಂದು ಕಾಲದಲ್ಲಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್ ಬದ್ಧ ವೈರಿಗಳಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಯಾವಾಗ

ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯ ನೀಡಿ : ಲೇಖಕ ಯೋಗೀಶ್ ಸಹ್ಯಾದ್ರಿ

  ಸುದ್ದಿಒನ್, ಚಿತ್ರದುರ್ಗ, ನ. 23 : ಕನ್ನಡಿಗರು ಎಷ್ಟೇ ಭಾಷೆಗಳನ್ನು ಕಲಿತರೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು. ಭಾರತದ ನೆಲದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ವಿಶಿಷ್ಟ ಸ್ಥಾನಮಾನವಿದೆ ಎಂದು ಲೇಖಕ ಹಾಗೂ

ಚಿತ್ರದುರ್ಗ | ನವೆಂಬರ್ 28 ರಂದು ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳ ಮಾರಾಟ ಮೇಳ…!

  ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಗರದ ಹೋಟೆಲ್ ದುರ್ಗದ ಸಿರಿಯಲ್ಲಿ ನವೆಂಬರ್ 28ರಂದು ಆಯೋಜಿಸಿದ್ದು, ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ

error: Content is protected !!