Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಿಂಗಾಯತ ಜಂಗಮ–ಬೇಡ ಜಂಗಮ  ಸಮುದಾಯಗಳ ಜಾತಿ ಪ್ರಮಾಣ ಪತ್ರ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಮುದ್ರೆ

---Advertisement---

ಲಿಂಗಾಯತ ಜಂಗಮರು ಹಾಗೂ ಬೇಡ (ಬುಡ್ಗ) ಜಂಗಮರು ವಿಭಿನ್ನ ಸಮುದಾಯಗಳು ಎಂಬುದನ್ನು ನ್ಯಾಯಾಲಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದು, ಈ ಸಂಬಂಧ ಮಹತ್ವದ ತೀರ್ಪು ಹೊರಬಿದ್ದಿದೆ. ಬೀದರ್ ಮೂಲದ ರವೀಂದ್ರಸ್ವಾಮಿ ಅವರು ಪರಿಶಿಷ್ಟ ಜಾತಿಗೆ ಸೇರಿದ ಬೇಡ ಜಂಗಮರಂತೆ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಪ್ರಕರಣ ಈ ತೀರ್ಪಿಗೆ ಕಾರಣವಾಗಿತ್ತು.

ಈ ವಿಚಾರವಾಗಿ ನಡೆದ ನ್ಯಾಯಾಂಗ ಹೋರಾಟದಲ್ಲಿ, ವೀರಶೈವ ಲಿಂಗಾಯತ ಜಂಗಮರು ಬೇಡ ಜಂಗಮ ಸಮುದಾಯಕ್ಕೆ ಸೇರಲ್ಲ ಎಂಬ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಸಹ ಮಾನ್ಯಗೊಳಿಸಿದೆ. ಹೈಕೋರ್ಟ್ ಈಗಾಗಲೇ ರವೀಂದ್ರಸ್ವಾಮಿ ಅವರ ಜಾತಿ ಪ್ರಮಾಣಪತ್ರವನ್ನು ರದ್ದುಪಡಿಸಿದ್ದರೆ, ಅದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನು ಸಮರ್ಥಿಸಿತು. ನಂತರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನೂ ತಿರಸ್ಕರಿಸಿದೆ.

ಅರ್ಜಿದಾರರ ಪರವಾಗಿ, ಜಂಗಮರು ಮೂಲತಃ ಅಲೆಮಾರಿ ಸಮುದಾಯವಾಗಿದ್ದು, ಇತಿಹಾಸದಲ್ಲಿ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆ ಅನುಭವಿಸಿರುವುದರಿಂದ ಅವರನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂದು ವಾದಿಸಲಾಗಿತ್ತು. ಆದರೆ ನ್ಯಾಯಾಲಯವು ಲಿಂಗಾಯತ ಜಂಗಮರು ಲಿಂಗಾಯತ ಧರ್ಮದ ಭಾಗವಾಗಿದ್ದು, ಅವರು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುಂದುವರೆದಿದ್ದಾರೆ ಎಂಬ ವಾದವನ್ನು ಪರಿಗಣಿಸಿ ತೀರ್ಪು ನೀಡಿದೆ.

ಈ ತೀರ್ಪಿನೊಂದಿಗೆ ದೀರ್ಘಕಾಲದಿಂದ ಚರ್ಚೆಯಲ್ಲಿದ್ದ ಈ ವಿವಾದಕ್ಕೆ ಅಂತಿಮ ತಿರುವು ಸಿಕ್ಕಂತಾಗಿದೆ. ಪರಿಣಾಮವಾಗಿ, ಲಿಂಗಾಯತ ಜಂಗಮರು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆಯುವ ಅವಕಾಶಕ್ಕೆ ಸದ್ಯಕ್ಕೆ ತೆರೆ ಬಿದ್ದಿದೆ. ಭವಿಷ್ಯದಲ್ಲಿ ಜಾತಿ ವರ್ಗೀಕರಣದಲ್ಲಿ ಬದಲಾವಣೆ ಬೇಕಾದರೆ, ಕೇಂದ್ರ ಸರ್ಕಾರದ ಮೂಲಕ ಸಂಸತ್ತಿನಲ್ಲಿ ಕಾನೂನು ತಿದ್ದುಪಡಿ ಅಗತ್ಯವಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ರಾಜ್ಯದಲ್ಲಿ ದಶಕಗಳಿಂದ ಚರ್ಚೆಯಾಗುತ್ತಿದ್ದ ಈ ವಿಚಾರಕ್ಕೆ ಸಂಬಂಧಿಸಿದಂತೆ ಹೊರಬಂದ ತೀರ್ಪು, ಮೀಸಲಾತಿ ರಾಜಕಾರಣದಲ್ಲಿ ಹೊಸ ಚರ್ಚೆಗಳಿಗೆ ಕಾರಣವಾಗಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಸೆಳೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...