Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿ.ಎಂ. ಸಿದ್ದರಾಮಯ್ಯ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜು 20: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇದಾವಿಯಾದರು ಎಂದು ವಿವರಿಸಿದರು.

ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು.

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು.

ಎಸ್ ಸಿ/ ಎಸ್ ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ 24% ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ 24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದರು.

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಮಗವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು.

ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು.

ಸಚಿವರಾದ ಶಿವರಾಜ್ ತಂಗಡಗಿ, ಡಿ.ಸುಧಾಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ರಘುಮೂರ್ತಿ, ವೀರೇಂದ್ರ ಪಪ್ಪಿ, ಹೆಚ್.ವಿ.ವೆಂಕಟೇಶ್, ಶ್ರೀನಿವಾಸ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಚಂದ್ರಣ್ಣ ಸೇರಿ ಹಲವು ಮಂದಿ ಸಮಾಜದ ಮುಖಂಡರು ಮತ್ತು ಸಮುದಾಯದ ಶ್ರೀಗಳು ಹಾಗೂ ನಾನಾ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!