Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿ ವಿವಾದ : ಕೇಂದ್ರ ಸರ್ಕಾರ ಮಧ್ಯಸ್ಥಿಕೆವಹಿಸಿ ಸಮಸ್ಯೆ ಬಗೆಹರಿಸಲಿ : ಚಿತ್ರದುರ್ಗದಲ್ಲಿ ಮಧು ಬಂಗಾರಪ್ಪ ಹೇಳಿಕೆ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ(ಸೆ.21) : ಕಾವೇರಿ ನೀರಿನ ಸಂಬಂಧಪಟ್ಟಂತೆ ತಮಿಳುನಾಡಿಗೆ ನೀರನ್ನು ಬಿಡುಗಡೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.

ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಅವರನ್ನು ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ಬಂಗಾರಪ್ಪರವರು ಮುಖ್ಯಮಂತ್ರಿಗಳಾಗಿದ್ದಾಗ ಇದ್ದ ಪರಿಸ್ಥಿತಿ ಬೇರೆ ಈಗಿನ ಪರಿಸ್ಥಿತಿ ಬೇರೆಯಾಗಿದೆ. ಆಗ ಯಾವುದೇ ರೀತಿಯ ನ್ಯಾಯ ಮಂಡಳಿಗಳು ಇರಲಿಲ್ಲ ನ್ಯಾಯಾಲಯಕ್ಕೆ ಹೋಗುವವರು ಇರಲಿಲ್ಲ. ಆದರೆ ಈಗ ಮಂಡಳಿ ಇದೆ ಸ್ವಲ್ಪ ವ್ಯತ್ಯಾಸವಾದರೂ ಸಹಾ ನ್ಯಾಯಾಲಯದ ಮೊರೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ.
ನಾವುಗಳು ಮತ್ತು ಶಾಸಕರೆಲ್ಲರು ಮುಖ್ಯಮಂತ್ರಿಗಳಿಗೆ ಬೆಂಬಲವನ್ನು ನೀಡಿದ್ದೇವೆ ಅವರು ಸಮಸ್ಯೆಯನ್ನು ಪರಿಹಾರ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಕಾವೇರಿ ನೀರಿನ ವಿವಾದಕ್ಕೆ ಸಂಬಂಧಪಟ್ಟಂತೆ ಎರಡು ರಾಜ್ಯದವರ ಮಧ್ಯ ಕೇಂದ್ರ ಸರ್ಕಾರ ಪ್ರವೇಶವನ್ನು ಮಾಡುವುದರ ಮೂಲಕ ಈ ಸಮಸ್ಯೆಯನ್ನು ಪರಿಹಾರ ಮಾಡಬೇಕಿದೆ. ಡ್ಯಾಂನಲ್ಲಿ ನೀರಿಲ್ಲ ಆದರೂ ನೀರನ್ನು ಕೂಡಿ ಎಂದರೆ ಹೇಗೆ ಕಣ್ಣ ಮುಂದೆ ಡ್ಯಾಂನ ಚಿತ್ರಣ ಇದನ್ನು ಕೇಂದ್ರ ಸರ್ಕಾರ ಅರಿಯಬೇಕಿದೆ. ಈ ವಿಷಯದ ಬಗ್ಗೆ ಮುಖ್ಯಮಂತ್ರಿಗಳು ಏನೇ ನಿರ್ಧಾರವನ್ನು ತೆಗೆದುಕೊಂಡರು ಸಹಾ ನಮ್ಮ ಸ್ವಾಗತ ಇದೆ. ಎಂದ ಸಚಿವರು, ಬಂಗಾರಪ್ಪ ರವರು ಅಂದು ತೆಗೆದುಕೊಂಡಿದ್ದ ನಿರ್ಧಾರ ಐತಿಹಾಸಿಕವಾಗಿತ್ತು ಅದ ಮೇಲೆ ರಾಜ್ಯದಲ್ಲಿ ಬಹಳಷ್ಟು ಮುಖ್ಯಮಂತ್ರಿಗಳು ಬಂದರು ಹೋದರು ಅಗ ನೀರನ್ನು ಬಿಟ್ಟರು ಮತ್ತೇ ಕೆಲವರು ನ್ಯಾಯಾಲಯದ ಮೊರೆ ಹೋದರು, ಇಂದು ಸಹಾ ಇದರ ಬಗ್ಗೆ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ಬಂತರ ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದರೆ ನಾವು ಅವರ ಕೈಜೋಡಿಸುವುದಾಗಿ ಮಧು ಬಂಗಾರಪ್ಪ ತಿಳಿಸಿದರು.

ರಾಜ್ಯದಲ್ಲಿ ಶಿಕ್ಷಕರ ಕೂರತೆ ಇರುವ ಕಡೆಯಲ್ಲಿ ಖಾಯಂ ಶಿಕ್ಷಕರ ಬದಲು ಅತಿಥಿ ಶಿಕ್ಷಕರನ್ನು ನೀಡಲಾಗಿದೆ, ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೂರತೆ ಇತ್ತು ಇದರಲ್ಲಿ 43 ಸಾವಿರ ಶಿಕ್ಷಕರನ್ನು ನೀಡಲಾಗಿದೆ. 10.500 ಶಿಕ್ಷಕರು ಆದೇಶವನ್ನು ಕಾಯುತ್ತಿದ್ದಾರೆ ಇದನ್ನು ನೀಡಲು ನ್ಯಾಯಾಲಯದ ಆದೇಶ ಬೇಕಿದೆ. ಅದು ತೀರ್ಮಾನವಾದ ಮೇಲೆ ಆದೇಶವನ್ನು ನೀಡಲಾಗುವುದು. ಈಗ 125 ದಿನದಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ವಿವಿಧ ರೀತಿಯ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.

ಮಕ್ಕಳಿಗೆ ಮೂರು ಸಲ ಪರೀಕ್ಷೆ ಪಠ್ಯ ಪರಿಷ್ಕರಣೆಯಂತಹ ಕೆಲಸವನ್ನು ಮಾಡಲಾಗಿದೆ ಇನ್ನು ಕೆಲವು ಬದಲಾವಣೆಯನ್ನು ಮಾಡಬೇಕಿದೆ ಅದಕ್ಕೆ ಕಾಲಾವಕಾಶ ಬೇಕಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಶೀಘ್ರವಾಗಿ ಹೆಚ್ಚಿನ ಪ್ರಮಾಣದಲ್ಲಿ ಸ್ಥಾಪನೆ ಮಾಡಲಾಗುವುದು. ತಕ್ಷಣ ಉತ್ತಮವಾದ ಶಾಲೆಗಳನ್ನು ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಅದರಂತೆ ಶಾಶ್ವತವಾದ ಕಾರ್ಯವನ್ನು ಮಾಡುವಂತೆ ತಿಳಿಸಲಾಗಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!