Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾವೇರಿಗಾಗಿ ಧನಿಗೂಡಿಸಿದ ಕನ್ನಡದ ಬಿಗ್ ಸ್ಟಾರ್ಸ್

---Advertisement---

 

ಮಂಡ್ಯ: ಕಾವೇರಿ ನದಿ ದಿನೇ ದಿನೇ ಖಾಲಿಯಾಗುತ್ತ ಇದೆ. ಆದರೆ ತಮಿಳುನಾಡಿಗೆ ನೀರು ಬಿಡಬೇಕು ಎಂಬ ತೀರ್ಮಾನ ಮಾತ್ರ ಹಿಂದೆ ತೆಗೆದುಕೊಳ್ಳುತ್ತಿಲ್ಲ. ಸರ್ಕಾರ ಕೂಡ ಕಾವೇರಿ ನೀರಿನ ಬಗ್ಗೆ ಮನವರಿಕೆ ಮಾಡಲು ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಇತ್ತ ಸ್ಯಾಂಡಲ್ ವುಡ್ ನಟರು ಯಾರು ಕಾವೇರಿ ಪರ ಧ್ವನಿ ಎತ್ತುತ್ತಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕಿದ್ದರು. ಈ ಬೆನ್ನಲ್ಲೇ ಸ್ಯಾಂಡಲ್ ವುಡ್ ಸ್ಟಾರ್ ಗಳು ಕಾವೇರಿ ಬಗ್ಗೆ ಮಾತನಾಡಲು ಶುರು ಮಾಡಿದ್ದಾರೆ.

ನಿನ್ನೆಯೆಲ್ಲಾ ದರ್ಶನ್ ಹಾಗೂ ಸುದೀಪ್ ದನಿ ಎತ್ತಿದ್ದರು. ಇಂದು ಅನಂತ್ ನಾಗ್, ಶಿವಣ್ಣ ಸೇರಿದಂತೆ ಹಲವರು ಮಾತನಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿರುವ ನಟ ಶಿವ ರಾಜ್ ಕುಮಾರ್, ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು ರೈತ ಆಗಲೇ ಸಂಕಷ್ಟದಲ್ಲಿದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ ಎಂದಿದ್ದಾರೆ.

ಹಿರಿಯ ನಟ ಅನಂತ್ ನಾಗ್ ಮಾತನಾಡಿ, ಕಾವೇರಿ ಗಲಾಟೆಯನ್ನು ಸುಮಾರು 60 ವರ್ಷದಿಂದ ನೋಡಿಕೊಂಡು ಬಂದಿದ್ದೇವೆ. ಕಾಂಗ್ರೆಸ್ ಕಾಲದಿಂದಾನು ಇದೆ. ಡಿಎಂಕೆ ಜೊತೆ ಸೇರಿ ಸಮಸ್ಯೆ ಬಗೆಹರಿಸಿಲ್ಲ. ಬ್ರಿಟಿಷ್ ಸರ್ಕಾರ ಇದ್ದಾಗ ತಮಿಳು ನಾಡಿಗೆ ಹೆಚ್ಚು ನೀರು ಬಿಡುಗಡೆ ಮಾಡುವ ಉಲ್ಲೇಖವಿದೆ. ಇದನ್ನು ಸರಿ ಮಾಡುವ ಕೆಲಸ ಆಗಿಲ್ಲ ಎಂದಿದ್ದಾರೆ.

ಇನ್ನು ಡಾಲಿ ಧನಂಜಯ ಟ್ವೀಟ್ ಮಾಡಿದ್ದು, ಮಳೆಯ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದಾರೆ.
ಕಾವೇರಿ ಕೃಷ್ಣ ನದಿಗಳ ಹೋರಾಟ ನಮ್ಮ ಎಲ್ಲರ ಕರ್ತವ್ಯ . ನಮ್ಮ ರೈತರಿಗೆ ಸಿಗಬೇಕಾದ ಪಾಲು ಸಿಗಲೇಬೇಕು. ನಮ್ಮ ಹಕ್ಕಿಗಾಗಿ ಸದಾ ಹೋರಾಡೋಣ. ಕಾವೇರಿ ಸಂಘರ್ಷ ಬೇಗ ಅಂತ್ಯವಾಗಲಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...