ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದಕ್ಕೆ ವಿರೋಧಿಸಿ ರೈತರು ಇಂದು ಮಂಡ್ಯ ಬಂದ್ ಮಾಡಿದ್ದಾರೆ. ಅಷ್ಟೇ ಅಲ್ಲ ಮಂಗಳವಾರ ಬೆಂಗಳೂರು ಬಂದ್ ಗೂ ಕರೆ ನೀಡಿವೆ. ಈ ಸಮಸ್ಯೆಯ ನಡುವೆ ಕಾಂಗ್ರೆಸ್ ಸರ್ಕಾರಕ್ಕೆ ಸಮುದಾಯಗಳ ಡಿಸಿಎಂ ವಿಚಾರ ಕೂಡ ತಲೆನೋವಾಗಿ ಪರಿಣಮಿಸಿದೆ.
ಸಚಿವ ಕೆ ಎನ್ ರಾಜಣ್ಣ, ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮೂರು ಡಿಸಿಎಂ ಹುದ್ದೆಗಳ ಅವಶ್ಯಕತೆ ಇದೆ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಡಿಸಿಎಂ ಚರ್ಚೆ ಹುಟ್ಟು ಹಾಕಿದರು. ಇದೀಗ ಶಾಸಕ ಬಸವರಾಜ ರಾಯರೆಡ್ಡಿ ಸಮುದಾಯಗಳಿಗೆ ಆರು ಡಿಸಿಎಂ ಹುದ್ದೆಗಳ ಬೇಡಿಕೆ ಇಟ್ಟಿದ್ದಾರೆ.
ಎಲ್ಲಾ ಜಾತಿ – ಧರ್ಮದವರು ಕೂಡ ಕಾಂಗ್ರೆಸ್ ಗೆ ಬೆಂಬಲ ನೀಡಿವೆ. ಹೀಗಾಗಿ ಅಲ್ಪಸಂಖ್ಯಾತ, ಎಸ್‌ಸಿ / ಎಸ್ಟಿ ಸಮುದಾಯಗಳಿಗೆ ಡಿಸಿಎಂ ಹುದ್ದೆ ನೀಡಬೇಕು. ಎಂದಿದ್ದಾರೆ. ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಎಸ್ಸಿ, ಅಲ್ಪಸಂಖ್ಯಾ ಮತ್ತು ವೀರಶೈವ ಲಿಂಗಾಯತ ಸಮುದಾಯಗಳ ತಲಾ ಓರ್ವ ಮುಖಂಡನನ್ನು ಉಪಮುಖ್ಯಮಂತ್ರಿ ಮಾಡಬೇಕೆಂದು ಸಹಕಾರ ಸಚಿವ ರಾಜಣ್ಣ ಇತ್ತೀಚೆಗೆ ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಪರ-ವಿರೋಧ ವ್ಯಕ್ತವಾಗಿತ್ತು. ರಾಜಣ್ಣ ಹೇಳಿಕೆ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದರು.