Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸಿಎಂ ಡಿಕೆಶಿ ನೇತೃತ್ವದಲ್ಲಿ ಮಹತ್ವದ ಸರ್ವಪಕ್ಷ ಸಭೆ

---Advertisement---

ಬೆಂಗಳೂರು.ಆಗಸ್ಟ್.2: ರಾಜ್ಯದಲ್ಲಿ ಭೀಕರ ಮಳೆ ಅಭಾವ ಎದುರಾಗಿರುವ ಬೆನ್ನಲ್ಲೇ ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ಸರ್ಕಾರದ ಮುಂದಿನ ನಡೆ ಏನು ಎಂಬುದನ್ನು ನಿರ್ಧರಿಸಲು ಇಂದು ಬೆಂಗಳೂರಿನಲ್ಲಿ ಹೈವೋಲ್ಟೇಜ್ ಸರ್ವಪಕ್ಷ ಸಭೆ ಕರೆಯಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆಯಲಿರುವ ಈ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಹಿಸಲಿದ್ದು, ರಾಜ್ಯದ ಹಿತರಕ್ಷಣೆಗಾಗಿ ವಿರೋಧ ಪಕ್ಷಗಳ ನಾಯಕರ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆದುಕೊಳ್ಳಲಿದ್ದಾರೆ.

ಕಾವೇರಿ ನದಿ ಕೊಳ್ಳದ ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ನೆರೆ ರಾಜ್ಯಕ್ಕೆ ನೀರು ಬಿಡುವುದು ತೀರಾ ಅಸಾಧ್ಯ ಎಂಬುದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವಾಗಿದೆ. ಆದರೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ನಿಯಂತ್ರಣ ಸಮಿತಿಯು ತಮಿಳುನಾಡಿಗೆ ದಿನಂಪ್ರತಿ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಆದೇಶವು ರಾಜ್ಯ ಸರ್ಕಾರಕ್ಕೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ಪ್ರಾಧಿಕಾರದ ಈ ಆದೇಶವನ್ನು ಪಾಲಿಸಬೇಕೇ ಅಥವಾ ಸಾರಾಸಾಗಟಾಗಿ ತಿರಸ್ಕರಿಸಬೇಕೇ ಎಂಬ ಗಂಭೀರ ಪ್ರಶ್ನೆ ಸರ್ಕಾರದ ಮುಂದಿದೆ. ಒಂದು ವೇಳೆ ಪ್ರಾಧಿಕಾರದ ಮಾತನ್ನು ಪಾಲಿಸದಿದ್ದರೆ ಮುಂದೆ ಎದುರಾಗಬಹುದಾದ ಕಾನೂನು ತೊಡಕುಗಳು ಹಾಗೂ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಕುರಿತು ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಲಾಗುತ್ತದೆ. ನ್ಯಾಯಾಲಯದಲ್ಲಿ ರಾಜ್ಯದ ಪರವಾಗಿ ಯಾವೆಲ್ಲ ಬಲವಾದ ವಾದಗಳನ್ನು ಮಂಡಿಸಬೇಕು ಎಂಬ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

Join WhatsApp

Join Now

Join Telegram

Join Now