CBSE 10th Result 2023 : ಚಿತ್ರದುರ್ಗದ ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 6ನೇ ವರ್ಷವೂ ಶೇಕಡ 100% ಫಲಿತಾಂಶ

 

ಚಿತ್ರದುರ್ಗ, (ಮೇ.12) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 6ನೇ ವರ್ಷವೂ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿ ಯಶಸ್ಸಿನ ಹಾದಿಯಲ್ಲಿ ಮುನ್ನೆಡೆದಿದೆ.

2022-23ನೇ ಸಾಲಿನ 10ನೇ ತರಗತಿಯ ಪರೀಕ್ಷೆಯಲ್ಲಿ ಸತತ ಎರಡನೆಯ ಬಾರಿಗೆ ಶಾಲೆಯು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದೆ.

ಈ ಬಾರಿ ಶಾಲೆಯ ವಿದ್ಯಾರ್ಥಿಗಳಾದ ಆನಂದ ಎನ್. ವೈ (97.2%) ಮತ್ತು ಹನ್ಸಿಕಾ ಬಸವರಾಜು (96.2%) ಅನುಕ್ರಮವಾಗಿ ಜಿಲ್ಲೆಗೆ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ.

ಒಟ್ಟು 103 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು (90% ಕ್ಕಿಂತ ಹೆಚ್ಚು ಪಡೆದಿದ್ದಾರೆ) ಪ್ರಥಮ್ ಎಸ್.ಆರ್ 95.2%, ಹರ್ಷಪಾಟೇಲ್. 95%, ಹರ್ಷಿತ ಎಮ್ 95%, ಇವರುಗಳು ನಂತರದ ಸ್ಥಾನಗಳಲ್ಲಿದ್ದಾರೆ. 32 ವಿದ್ಯಾರ್ಥಿಗಳು ಅಗ್ರ ಶ್ರೇಣಿಯಲ್ಲಿದ್ದು, ಉಳಿದ 55 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಈ ಫಲಿತಾಂಶದಿಂದ ಸಂತೋಷಗೊಂಡು ಸಂಸ್ಥೆಯ ಅಧ್ಯಕ್ಷರು ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಧ್ಯಾಕ್ಷರಾದ ಅಮೋಘ್ ಬಿ. ಎಲ್. ಡಾ|| ರವಿ ಟಿ.ಎಸ್. ಸಂಸ್ಥೆಯ ಆಡಳಿತಾಧಿಕಾರಿಗಳು, ಪ್ರಭಾಕರ್. ಎಂ. ಎಸ್, ಪ್ರಾಂಶುಪಾಲರು, ಬಿ.ವಿ ರಾಕೇಶ್ ಸಂಯೋಜಕರು  ಹಾಗೂ ಶಾಲೆಯ ಶಿಕ್ಷಕವೃಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಶುಭಾಶಯ ತಿಳಿಸಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago