Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

CBSE 10ನೇ ತರಗತಿ ಫಲಿತಾಂಶ : ಚಿತ್ರದುರ್ಗದ ಇಂಡಿಯನ್ ಇಂಟರ್ನ್ಯಾಷನಲ್ ಶಾಲೆಯ ಅಪ್ರತಿಮ ಸಾಧನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 15 : ನಗರದ ಹೃದಯ ಭಾಗದಲ್ಲಿರುವ ಇಂಡಿಯನ್ ಇಂಟರ್ನ್ಯಾಷನಲ್ ಶಾಲೆ (CBSE), ವಿಶಾಲವಾದ ಶಾಲಾ ಸಮುಚ್ಚಯ, ಅತ್ಯಾಧುನಿಕ ಪ್ರಯೋಗಾಲಯಗಳು, ಅನುಭವಸಂಪನ್ನ ಶಿಕ್ಷಕರ ವೃಂದ ಹಾಗೂ ನಿಖರವಾದ ಶೈಕ್ಷಣಿಕ ವ್ಯವಸ್ಥೆಯೊಂದಿಗೆ CBSE 10ನೇ ತರಗತಿಯಲ್ಲಿ ಪ್ರಶಂಸನೀಯ ಫಲಿತಾಂಶವನ್ನು ದಾಖಲಿಸಿದೆ.

ವಲಯ ಮಟ್ಟದಲ್ಲಿ 5ನೇ ಸ್ಥಾನವನ್ನು ಪಡೆದಿದ್ದ ಈ ಶಾಲೆ, 2025–26ನೇ ಶೈಕ್ಷಣಿಕ ವರ್ಷದ CBSE 10ನೇ ತರಗತಿ ಪರೀಕ್ಷೆಗಳಲ್ಲಿ ಮತ್ತೊಮ್ಮೆ ಅತ್ಯುತ್ತಮ ಸಾಧನೆ ಮಾಡಿದ್ದು, ತನ್ನ ಶ್ರೇಷ್ಠ ಫಲಿತಾಂಶಗಳ ಪರಂಪರೆಯನ್ನು ಮುಂದುವರಿಸಿದೆ. ಈ ಬಾರಿ ಶಾಲೆಯು ಸಂಪೂರ್ಣ ಚಿತ್ರದುರ್ಗ ಜಿಲ್ಲೆಯಲ್ಲೇ ಪ್ರಥಮ ಸ್ಥಾನವನ್ನು ಗಳಿಸಿದೆ.

ವಿದ್ಯಾರ್ಥಿನಿ ಶುಚಿತಾ ಅವರು 500ಕ್ಕೆ 493 (98.60%) ಅಂಕಗಳನ್ನು ಪಡೆದು ಜಿಲ್ಲೆಯಲ್ಲಿಯೂ ಹಾಗೂ ಶಾಲೆಯಲ್ಲಿಯೂ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಮುಂದಿನ ಸ್ಥಾನಗಳಲ್ಲಿ:
• ರಿಷಾನ್ ಅಹಮದ್ – 94%
• ಮನೋಜ್ ಪಿ. ಆರ್. – 94%
ಶಾಲೆಯ ಒಟ್ಟು ಫಲಿತಾಂಶವೂ ಅತ್ಯುತ್ತಮವಾಗಿದ್ದು, 49 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಸಾಧನೆಗೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಸಹಕಾರವೇ ಪ್ರಮುಖ ಕಾರಣವಾಗಿದೆ. ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗವು ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಭವಿಷ್ಯ ಇನ್ನಷ್ಟು ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಶಾಲೆಯು ಮುಂದಿನ ದಿನಗಳಲ್ಲಿಯೂ ಉತ್ತಮ ಗುಣಮಟ್ಟದ ಶಿಕ್ಷಣದ ಮೂಲಕ ಇನ್ನಷ್ಟು ಸಾಧನೆ ಮಾಡಲು ಬದ್ಧವಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...