Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕದನ ವಿರಾಮ ಉಲ್ಲಂಘನೆ : ಪಾಕಿಸ್ತಾನದ ಶೆಲ್ ದಾಳಿಗೆ ಬಿಎಸ್‌ಎಫ್ ಯೋಧ ಹುತಾತ್ಮ, ಏಳು ಮಂದಿಗೆ ಗಾಯ

---Advertisement---

ನವದೆಹಲಿ/ಜಮ್ಮು, ಮೇ 10 : ಜಮ್ಮುವಿನ ಅಂತರರಾಷ್ಟ್ರೀಯ ಗಡಿಯಲ್ಲಿ ಶನಿವಾರ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್‌ಎಫ್ ಯೋಧರೊಬ್ಬರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಆರ್‌ಎಸ್ ಪುರ ವಲಯದಲ್ಲಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಹಿರಿಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿ ಸಬ್-ಇನ್ಸ್‌ಪೆಕ್ಟರ್ ಮೊಹಮ್ಮದ್
ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಇತರ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಿಎಸ್‌ಎಫ್ ಮಹಾನಿರ್ದೇಶಕರು ಮತ್ತು ಎಲ್ಲಾ ಶ್ರೇಣಿಗಳ ಅಧಿಕಾರಿಗಳು ಅವರ ಕುಟುಂಬಕ್ಕೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಇಮ್ತೆಯಾಜ್ ಅವರಿಗೆ ಗೌರವ ಸಲ್ಲಿಸಲು ಭಾನುವಾರ ಪಲೌರಾದಲ್ಲಿರುವ ಬಿಎಸ್‌ಎಫ್‌ನ ಜಮ್ಮು ಗಡಿನಾಡಿನ ಪ್ರಧಾನ ಕಚೇರಿಯಲ್ಲಿ ಮಾಲಾರ್ಪಣೆ ಸಮಾರಂಭ ನಡೆಯಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment