Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ :  ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

Facebook
Twitter
Telegram
WhatsApp

ಚಿತ್ರದುರ್ಗ,(ಆಗಸ್ಟ್ 30) : ಗಣೇಶ ಹಬ್ಬವನ್ನು ಪರಿಸರಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಈ ಮಾರ್ಗಸೂಚಿಗಳನ್ನು ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪಾಲಿಸಿ, ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಜಿಲ್ಲೆಯ ನಾಗರಿಕರಲ್ಲಿ ಕೋರಿದ್ದಾರೆ.

ಪಾಲಿಸಬೇಕಾದ ಮಾರ್ಗಸೂರ್ಚಿಗಳು: ಈಗಾಗಲೇ ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಾಲಿನ್ಯ ಮಂಡಳಿಯು ಪಿಒಪಿ ನಿಂದ ತಯಾರಿಸುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಪಿಓಪಿ ಮತ್ತು ಲೋಪ ಮಿಶ್ರಿತ ಬಣ್ಣದಿಂದ ತಯಾರಿಸಿದ ವಿಗ್ರಹಗಳನ್ನು ಯಾವುದೇ ಜಲಮೂಲಗಳಲ್ಲಿ ವಿಸರ್ಜನೆಯಾಗದ ರೀತಿಯಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಕ್ರಮ ಕೈಗೊಳ್ಳುವುದು.

ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗರಿಷ್ಠ 5 ಅಡಿ ಎತ್ತರದ ಮಣ್ಣಿನ ವಿಗ್ರಹಗಳನ್ನು ಮಾತ್ರ ತಯಾರಿಸಲು ಅನುಮತಿ ನೀಡುವುದು (ಮೂರ್ತಿಗಳ ಸರಾಸರಿ ತೂಕ, ಬಿರುಕು, ಸಾಗಾಣಿಕೆ ಮತ್ತು ತ್ಯಾಜ್ಯ ಉತ್ಪನ್ನ ಪರಿಗಣಿಸಿ ಈ ಕ್ರಮ ಶಿಫಾರಸ್ಸು ಮಾಡಲಾಗಿದೆ). ಪಿಒಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಸಂಸ್ಥೆಗಳಿಗೆ ವ್ಯಾಪಾರದ ಲೈಸೆನ್ಸ್ ನೀಡಿದಿರಲು ಮತ್ತು ಲೈಸೆನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿ, ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸುವುದು.

ಸಾರಿಗೆ ಇಲಾಖೆ ಅಧಿಕಾರಿಗಳು ಬೇರೆ ಊರುಗಳಿಂದ ಮತ್ತು ರಾಜ್ಯಗಳಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಚೆಕ್‍ಪೋಸ್ಟ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವುದು. ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ವಿಸರ್ಜಿಸದೆ ಉಳಿದಿರುವ, ತಯಾರಿಸಿದ, ಮಾರಾಟ ಮಾಡಲು ಸಿದ್ಧವಾಗಿರುವ ಪಿಒಪಿ ಅಥವಾ ಲೋಹ ಮಿಶ್ರಿತ ಬಣ್ಣದ ವಿಗ್ರಹಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡು ಅವುಗಳನ್ನು ಸ್ಥಳೀಯ ಸಂಸ್ಥೆಗಳಲ್ಲಿ ಇರುವ ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಿ ಶ್ರೇಡರ್‍ಗಳನ್ನು ಉಪಯೋಗಿಸಿಕೊಂಡು ಒಂದೇ ಸ್ಥಳದಲ್ಲಿ ವಿಲೇವಾರಿ ಮಾಡುವುದು.

ಉತ್ಸವ ಮೂರ್ತಿ ಬಿಡುವ ಕೆರೆ, ಕಲ್ಯಾಣಿ ಮತ್ತು ಸ್ಥಳಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವುದು ಹಾಗೂ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಬ್ಯಾಂಕ್‍ಗಳಲ್ಲಿ ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು.

ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಈ ಅನುಮತಿ ಪತ್ರಗಳಲ್ಲಿ ಲೈಸೆನ್ಸ್ ನೀಡುವ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸುವುದು.

ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸುವುದು. ಶಾಲಾ-ಕಾಲೇಜುಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸ್ಥಳೀಯ ಸಂಸ್ಥೆಗಳು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮವಹಿಸಬೇಕು. ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಜಿಲ್ಲೆಯ ನಾಗರಿಕರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!