Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕಕ್ಕೆ 50 ವರ್ಷಗಳ ಸಂಭ್ರಮಾಚರಣೆ, ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆಗೆ ಚಿತ್ರದುರ್ಗ ಜಿಲ್ಲಾಡಳಿತ ಸಕಲ ಸಿದ್ದತೆ

Facebook
Twitter
Telegram
WhatsApp

ಚಿತ್ರದುರ್ಗ. ಅ.31: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 01 ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ.  ಹೀಗಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು ಹೆಚ್ಚು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳು ನಡೆದಿದೆ.

ಕರ್ನಾಟಕ 50 ವರ್ಷಗಳ ಸಂಭ್ರಮ ಆಚರಿಸುತ್ತಿರುವುದರಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿಶೇಷ ಮೆರುಗು ಬಂದಿದೆ.  ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಸಮಾರಂಭ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.  ವೇದಿಕೆಯು ಹಳದಿ ಮತ್ತು ಕೆಂಪು ಬಣ್ಣದ ಬಗೆ ಬಗೆಯ ವಿನ್ಯಾಸದಿಂದ ಅಲಂಕೃತಗೊಂಡಿದ್ದು, ಇಡೀ ಮೈದಾನದಲ್ಲಿ ಕನ್ನಡ ಬಾವುಟ, ಕನ್ನಡ ನಾಡು ನುಡಿ ಬಿಂಬಿಸುವ ರೀತಿ ಮೈದಾನ ಸಜ್ಜುಗೊಂಡಿದ್ದು ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ.

ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಅಂದು ಬೆಳಿಗ್ಗೆ 7.30 ಕ್ಕೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಯು ನಗರದ ನೀಲಕಂಠೇಶ್ವರ ದೇಗುಲದಿಂದ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ ನಮ್ಮ ನಾಡು, ನುಡಿ, ಸಂಸ್ಕøತಿ ಬಿಂಬಿಸುವ ವಿವಿಧ ವೈವಿಧ್ಯಮಯ ಜಾನಪದ ಕಲಾತಂಡಗಳು ಪಾಲ್ಗೊಳ್ಳಲಿದ್ದು, ಸಾರ್ವಜನಿಕರು, ಅಧಿಕಾರಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಪಂಚಾಯಿತಿ, ಭದ್ರಾ ಮೇಲ್ದಂಡೆ ಯೋಜನೆ, ಸರ್ಕಾರದ ಗ್ಯಾರಂಟಿ ಯೋಜನೆಗಳ ಸ್ತಬ್ಧಚಿತ್ರಗಳು, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರದ ಯೋಜನೆಗಳನ್ನು ಸ್ತಬ್ಧಚಿತ್ರಗಳ ಮೂಲಕ ಸಾರ್ವಜನಿಕರಿಗೆ ತಲುಪಿಸಲಾಗುವುದು.  ಮೆರವಣಿಗೆಯು ನಗರದ ನೀಲಕಂಠೇಶ್ವರದ ದೇಗುಲದಿಂದ ಹೊರಟು, ಪ್ರಮುಖ ರಸ್ತೆ ಮೂಲಕ ರಾಜ್ಯೋತ್ಸವ ಸಮಾರಂಭ ಜರುಗುವ ಪೊಲೀಸ್ ಕವಾಯತು ಮೈದಾನದವರೆಗೆ ಸಾಗಿ ಬರಲಿದೆ.

ಅಂದು ಬೆಳಿಗ್ಗೆ 9ಕ್ಕೆ ಪೊಲೀಸ್ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ, ರಾಷ್ಟ್ರಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ನಾಡಗೀತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯೋತ್ಸವ  ಸಂದೇಶ ನೀಡುವರು.

ಕನ್ನಡಾಂಬೆಗೆ ನುಡಿ ನಮನ: ಕರ್ನಾಟಕಕ್ಕೆ 50 ರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷವಾಗಿ ಈ ನಾಡಿನ ಹೆಸರಾಂತ 05 ಕವಿಗಳು ರಚಿಸಿರುವ ಗೀತೆಗಳನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ಇದರನ್ವಯ ಹುಯಿಲಗೋಳ ನಾರಾಯಣರಾಯರು ರಚಿಸಿರುವ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು”, ಕುವೆಂಪು ರಚಿತ “ಎಲ್ಲಾದರು ಇರು ಎಂತಾದರು ಇರು”, ದ.ರಾ.ಬೇಂದ್ರ ರಚಿಸಿರುವ “ಒಂದೇ ಒಂದೇ ಕರ್ನಾಟಕ ಒಂದೇ”, ಸಿದ್ದಯ್ಯ ಪುರಾಣಿಕರು ರಚಿಸಿರುವ “ಹೊತ್ತಿತೋ ಹೊತ್ತಿತು ಕನ್ನಡದ ದೀಪ”, ಹಾಗೂ ಚನ್ನವೀರ ಕಣವಿ ಅವರು ಬರೆದಿರುವ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ 05 ಗೀತೆಗಳನ್ನು ಗೀತ ಗಾಯನ ತಂಡವು ಪ್ರಸ್ತುತ ಪಡಿಸಲಿದೆ. ಇದೇ ರೀತಿ, ಜಿಲ್ಲೆಯ ಎಲ್ಲೆಡೆಯೂ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 05 ಗೀತೆಗಳನ್ನು ಕಡ್ಡಾಯವಾಗಿ ಹಾಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಮಾರಂಭದಲ್ಲಿ ಸಾಹಿತ್ಯ, ಸಂಗೀತ, ಕಲೆ (ರಂಗಭೂಮಿ), ಜಾನಪದ, ಸಮಾಜ ಸೇವೆ, ಪರಿಸರ ಸಂರಕ್ಷಣೆ, ಕೃಷಿ, ಕ್ರೀಡೆ, ವಿಜ್ಞಾನ ತಂತ್ರಜ್ಞಾನ ಸಂಶೋಧನೆ, ವೈದ್ಯಕೀಯ, ವಿಶೇಷಚೇತನರ ಕ್ರೀಡೆ, ಚಿತ್ರಕಲೆ, ಪತ್ರಿಕೋದ್ಯಮ, ಛಾಯಾಗ್ರಹಣ ಕ್ಷೇತ್ರಗಳಲ್ಲಿ ಉತ್ತಮ ಹಾಗೂ ಗಣನೀಯ ಸೇವೆ, ಸಾಧನೆಗೈದ ಸಾಧಕರಿಗೆ ಸನ್ಮಾನ ನಡೆಯಲಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಘನ ಉಪಸ್ಥಿತಿ ವಹಿಸುವವರು. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ಮತ್ತು ರಾಜ್ಯೋತ್ಸವ ಸಂದೇಶ ನೀಡುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಗೌರವನ್ವಿತ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ. ಅನ್ವರ್ ಭಾಷಾ, ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ,  ಬಿ.ಜಿ. ಗೋವಿಂದಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ವೈ.ಎ. ನಾರಾಯಣಸ್ವಾಮಿ, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್ ಪಾಲ್ಗೊಳ್ಳಲಿದ್ದಾರೆ.

ಜಿಲ್ಲಾಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಅಂದು ಸಂಜೆ 6ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.

ವಿಶಿಷ್ಟ ರೀತಿಯಲ್ಲಿ ಆಚರಿಸಲು ಮನವಿ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಮನೆಗಳ ಮುಂದೆ ರಂಗೋಲಿ ಹಾಕಿ, ಗಾಳಿಪಟಗಳನ್ನು ಹಾರಿಸಿ, ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದರೊಂದಿಗೆ ರಾಜ್ಯೋತ್ಸವ ಸಂಭ್ರಮ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ  ಮನವಿ ಮಾಡಿದ್ದಾರೆ.

ಕರ್ನಾಟಕ ಸಂಭ್ರಮ-50 ರ ಅಂಗವಾಗಿ ನವೆಂಬರ್ 01 ರಂದು ಸಂಭ್ರಮದಲ್ಲಿ ಎಲ್ಲ ಸಾರ್ವಜನಿಕರೂ ತೊಡಗಿಸಿಕೊಳ್ಳಬೇಕು ಎಂಬ ಸದುದ್ದೇಶದಿಂದ ಸರ್ಕಾರ ಅಂದಿನ ದಿನದಂದು ವೈವಿಧ್ಯಮಯ ಚಟುವಟಿಕೆಗಳ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯುವಂತಾಗಲು ಹಲವು ನಿರ್ದೇಶನಗಳನ್ನು ನೀಡಿದೆ.  ಅದರನ್ವಯ ಈ ಬಾರಿಯ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ನವೆಂಬರ್ 01 ರಂದು ಜಿಲ್ಲೆಯ ಎಲ್ಲರೂ ತಮ್ಮ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷವಾಕ್ಯ ಬರೆಯುವಂತೆ ಅವರು ವಿನಂತಿಸಿದ್ದಾರೆ.

ನವೆಂಬರ್ 01 ರಂದು ಬೆಳಿಗ್ಗೆ 9 ಗಂಟೆಗೆ  ರಾಜ್ಯದ ಎಲ್ಲ ಆಕಾಶವಾಣಿ ಕೇಂದ್ರಗಳಿಂದ (ರೇಡಿಯೋ) ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಜಿಲ್ಲೆಯ ಎಲ್ಲಾ  ನಾಗರಿಕರು ನಾಡಗೀತೆ ಪ್ರಸಾರವಾಗುವ ಸಂದರ್ಭದಲ್ಲಿ ಎದ್ದು ನಿಂತು  ಗೌರವ ಸಲ್ಲಿಸಬೇಕು.  ಅದೇ ದಿನ ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ  ಸಂಭ್ರಮದ ಗಾಳಿಪಟ ಉತ್ಸವ ಆಚರಿಸಬೇಕು.  ಅದೇ ರೀತಿ ನವೆಂಬರ್ 01 ರ ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲೆಡೆ ಮನೆಗಳ ಮುಂದೆ, ಕಚೇರಿಗಳು ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಬೇಕು.  ಜಿಲ್ಲೆಯ ಎಲ್ಲ ನಾಗರಿಕರು, ಸಂಘ-ಸಂಸ್ಥೆಗಳು ರಂಗೋಲಿ, ಗಾಳಿಪಟ ಉತ್ಸವ ಹಾಗೂ ಕನ್ನಡಜ್ಯೋತಿ ಬೆಳಗುವ ಮೂಲಕ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಜಿಲ್ಲೆಯ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

ಕಡ್ಡಾಯವಾಗಿ ಭಾಗವಹಿಸಲು ಸೂಚನೆ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜರುಗುವ ಕಾರ್ಯಕ್ರಮ ಹಾಗೂ ಸಂಜೆ 05 ಗಂಟೆಗೆ ತ.ರಾ.ಸು. ರಂಗಮಂದಿರದಲ್ಲಿ ಜರುಗುವ ಕಾರ್ಯಕ್ರಮಗಳಲ್ಲಿ ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರು  ಗೈರು ಹಾಜರಾಗದಂತೆ ತಪ್ಪದೇ ಭಾಗವಹಿಸಬೇಕು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!