Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಯಕನ ಹೋರಾಟದ ಅರ್ಧ ಶತಮಾನಕ್ಕೆ ಸಂಭ್ರಮ: ಯಡಿಯೂರಪ್ಪರಿಗೆ ಭವ್ಯ ಗೌರವ ಸಮಾರಂಭ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮೇ. 02 : ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಯಡೆಯೂರಪ್ಪರವರ ಪರಿಶ್ರಮ ಅಧಿಕವಾಗಿದೆ, ಅವರ ಹೋರಾಟದ ಫಲವಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರವನ್ನು ನಡೆಸಲು ಕಾರಣವಾಯಿತು ಈ ಹಿನ್ನಲೆಯಲ್ಲಿ ಅವರ 50 ವರ್ಷದ ರಾಜಕೀಯ ಸಾರ್ಥಕ ಜೀವನಕ್ಕೆ ಪೂರಕವಾಗಿ ಮೇ. 9 ರಂದು ಅಭೀಮಾನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರದ ಗ್ರಾಹಕ ವ್ಯವಹಾರಗಳ ಆಹಾರ ಮತ್ತು ಸಾರ್ವಜನಿಕ ವಿತರಣಾ ಹೊಸ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಷಿ ತಿಳಿಸಿದರು.

ಚಿತ್ರದುರ್ಗ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಮೇ. 9 ರಂದು ನಡೆಸಲು ಉದ್ದೇಶಿಸಿರುವ ಅಭೀಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬೇಟಿ ನೀಡಿ ಪೆಂಡಾಲ್ ನಿರ್ಮಾಣ ಸ್ಥಳವನ್ನು ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರುಯಡಿಯೂರಪ್ಪ ಅಭಿಮಾನೋತ್ಸವ ಯಾವುದೇ ರಾಜಕಾರಣದ ಉದ್ದೇಶದಿಂದ ನಡೆಯುತ್ತಿರುವುದಲ್ಲ, ಅವರ ಮೇಲಿನ ಅಭಿಮಾನಕ್ಕಾಗಿ ನಡೆಯುತ್ತಿರುವುದು. ಇಲ್ಲಿ ಯಾವ ಶಕ್ತಿ ಪ್ರದರ್ಶನವೂ ಅಗತ್ಯವಿಲ್ಲ. ಕೇವಲ ಅಭಿಮಾನಕ್ಕೋಸ್ಕರ ಮಾಡ್ತಾ ಇರುವುದು ಕರ್ನಾಟಕದಲ್ಲಿ ಹೋರಾಟಕ್ಕೆ ಮತ್ತೊಂದು ಹೆಸರು ಅಂದ್ರೆ ಬಿಎಸ್ ಯಡಿಯೂರಪ್ಪ ಅವರು. ಪರಿಶ್ರಮಕ್ಕೆ ಮತ್ತೊಂದು ಹೆಸರು ಅಂದ್ರೆ ಬಿಎಸ್ ಯಡಿಯೂರಪ್ಪ ಅವರು. ಹಾಗಾಗಿ ಕರ್ನಾಟಕದಲ್ಲಿ ಕಳೆದ 50 ವರ್ಷಗಳಿಂದ ಬಡವರ, ಶೋಷಿತ ವರ್ಗದವರ, ರೈತರ ಪರವಾದ ಧ್ವನಿಯಾಗಿ, ನಿರಂತರವಾಗಿ, ದಣಿವರಿಯದೆ, ರಾಜ್ಯದ ಮೂಲೆಮೂಲೆಗಳಿಗೆ ಪ್ರವಾಸ ಮಾಡಿ, ರೈತರು ಎಲ್ಲಿಯೇ ಹೋರಾಟಮಾಡ್ತಾ ಇದ್ದರೆ ಅಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಇರ್ತಾ ಇದ್ದರು. ಅಂಥೊಬ್ಬ ಹೋರಾಟಗಾರ, ಜನನಾಯಕನನ್ನು ಗೌರವಿಸಬೇಕು ಎಂಬ ಕಾರಣಕ್ಕೆ ಅಭಿಮಾನೋತ್ಸವವನ್ನು ಮಾಡಲಾಗುತ್ತಿದೆ ಎಂದರು.

ನಾಡಿಗೆ ಯಡಿಯೂರಪ್ಪ ನೀಡಿದ ಕೊಡುಗೆಗೆ ಎಲ್ಲ ವರ್ಗದವರೂ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದಕ್ಕಾಗಿ ಅರ್ಥಪೂರ್ಣ. ಭವ್ಯ ಕಾರ್ಯಕ್ರಮ ನಡೆಸುತ್ತಿದ್ದೇವೆ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಜನರು ಬರಲಿದ್ದಾರೆ. ಒಂದು ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದು ವಿವರಿಸಿದ ಅವರು. ಜನ ಸೇವೆಗಾಗಿಯೇ ತಮ್ಮ ಜೀವನನ್ನೇ ಮುಡುಪಾಗಿ ಇಟ್ಟಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ದಲಿತರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರಿಗೆ ಧ್ವನಿಯಾಗಿ ಕೆಲಸವನ್ನು ಮಾಡಿದ್ದಾರೆ ಬಿಎಸ್.ವೈ ಎಂದರೆ ಹೋರಾಟ ಎಂಬ ಮನೋಭಾವ ಎಲ್ಲರಲ್ಲೂ ಸಹಾ ಮೂಡಿದೆ. ಛಲಕ್ಕೆ ಮತ್ತೊಂದು ಹೆಸರು ಯಡೆಯೂರಪ್ಪ ಎನ್ನಬಹುದಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ರಾಜ್ಯ ಕಾರ್ಯದರ್ಶಿ ತಮೇಶ್ ಗೌಡ್ರು, ಶರಣು ತಳ್ಳಿಕೇರೆ, ವಿಭಾಗ ಸಹಾ ಪ್ರಬಾರಿ ಎ.ಮುರಳಿ, ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗೀರೀಶ್, ವೆಂಕಟೇಶ್ ಯಾದವ್, ಮೋಹನ್ ಕುಮಾರ್, ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‍ಕುಮಾರ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಸಹ ವಕ್ತಾರ ಚಾಲುಕ್ಯ ನವೀನ್, ಎಸ್.ಸಿ.ಮೋರ್ಚಾದ ಅಧ್ಯಕ್ಷ ಪರಶುರಾಮ್, ರಾಜ್ಯ ರೈತ ಮೋರ್ಚಾದ ಮಲ್ಲಿಕಾರ್ಜನ್, ರಾಜ್ಯ ಯುವ ಮೋರ್ಚಾದ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್, ಮೋಹನ್ ಸಿರಿಗೇರೆ, ಯಶವಂತ,ಗ್ರಾಮಾಂತರ ಅಧ್ಯಕ್ಷ ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...