ಕಾಯಕ ಶರಣರ ಜಯಂತಿ ಆಚರಣೆ

1 Min Read

ಚಿತ್ರದುರ್ಗ, (ಮಾರ್ಚ್/01) :  ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಾಯಕ ಶರಣರಾದ ಮಾದಾರ ಚೆನ್ನಯ್ಯ, ಮಾದಾರ ದೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿ ಅವರ ಜಯಂತಿ ಕಾರ್ಯಕ್ರಮವನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾಯಕ ಶರಣರ ಜಯಂತಿಯನ್ನು ಸರಳವಾಗಿ ಹಮ್ಮಿಕೊಳ್ಳಲಾಗಿತ್ತು. ತಹಶೀಲ್ದಾರ್ ಸತ್ಯನಾರಾಯಣ ಅವರು ಕಾಯಕ ಶರಣರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ ಮಾತನಾಡಿ, ಕೋವಿಡ್-19ರ ಮೂರನೇ ಅಲೆಯ ಹಿನ್ನಲೆಯಲ್ಲಿ ಕಾಯಕ ಶರಣರ ಜಯಂತಿಯನ್ನು ಕಾಯಕ ಶರಣರಾದ ಮಾದಾರ ಚೆನ್ನಯ್ಯ, ಮಾದಾರ ದೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಬಿ.ರಾಜಪ್ಪ, ತೋಟಗಾರಿಕೆ ಇಲಾಖೆಯ ಶಶಿಧರ್ ಸೇರಿದಂತೆ ಮತ್ತಿತರರು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *