Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶಾಸಕ ವೀರೇಂದ್ರ ಪಪ್ಪಿ ಬಿಡುಗಡೆ ಬೆನ್ನಲ್ಲೇ ಸಂಭ್ರಮ

---Advertisement---

ಬೆಂಗಳೂರು: ಆನ್ಲೈನ್ ಬೆಟ್ಟಿಂಗ್ ಆಪ್ ಗಳಿಗೆ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜೈಲು ಪಾಲಾಗಿದ್ದಂತ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರು ಇಂದು ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗೆ ಬಂದ ಕೂಡಲೇ ಅವರ ಅಭಿಮಾನಿಗಳು ಸಿಕ್ಕಾಪಟ್ಟೆ ಸಂಭ್ರಮಿಸಿದ್ದಾರೆ.

ಬಿಡುಗಡೆಯಾದ ವೀರೇಂದ್ರ ಪಪ್ಪಿ ಅವರನ್ನು ಹೂವಿನ ಹಾರ ಹಾಕಿ ಸ್ವಾಗತ ಮಾಡಿದ್ದಾರೆ. ವೀರೇಂದ್ರ ಪಪ್ಪಿ ಅವರು ಬರುವುದನ್ನೇ ಅಭಿಮಾನಿಗಳು ಕಾಯುತ್ತಿದ್ದರು. ಬಂದೊಡನೆ ಅವರನ್ನ ಸ್ವಾಗತಿಸಿ, ಸಂಭ್ರಮಿಸಿದ್ದಾರೆ. ಪಟಾಕಿ ಸಿಡಿಸಿ, ಹಾರ ಹಾಕಿ ಕುಣಿದು ಕುಪ್ಪಳಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.

ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ (PMLA) ವೀರೇಂದ್ರ ಪಪ್ಪಿಯನ್ನ ಜಾರಿ ನಿರ್ದೇಶನಾಲಯ (ED) ಬಂಧಿಸಿತ್ತು. ಚಿತ್ರದುರ್ಗ, ಬೆಂಗಳೂರು ಸೇರಿದಂತೆ ವೀರೇಂದ್ರ ಪಪ್ಪಿ ಮನೆ, ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.  ಹಲವು ದಾಖಲೆಗಳನ್ನ ವಶಕ್ಕೆ ಪಡೆದು, ವೀರೇಂದ್ರ ಪಪ್ಪಿಯ ಖಾತೆಗಳನ್ನು ಫ್ರೀಜ್ ಮಾಡಲಾಗಿತ್ತು. ಕಳೆದ ನಾಲ್ಕು ತಿಂಗಳಿನಿಂದ ಜೈಲಿನಲ್ಲಿದ್ದ ಪಪ್ಪಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. 5 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ, ಸಾಕ್ಷಿನಾಶ ಮಾಡಬಾರದು, ದೇಶಬಿಟ್ಟು ತೆರಳಬಾರದೆಂಬ ಷರತ್ತಿನೊಂದಿಗೆ ಜಾಮೀನು ನೀಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...