ಜಮ್ಮು ಮತ್ತು ಕಾಶ್ಮೀರಕ್ಕೆ ಮಾಹಿತಿ ರವಾನಿಸಲು ಪಾಕಿಸ್ತಾನದಲ್ಲಿರುವ ಭಯೋತ್ಪಾದಕರು ಸಂವಹನ ವೇದಿಕೆಯಾಗಿ ಬಳಸುತ್ತಿದ್ದ 14 ಮೆಸೆಂಜರ್ ಮೊಬೈಲ್ ಅಪ್ಲಿಕೇಶನ್‌ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ.
ಈ ಆ್ಯಪ್‌ಗಳ ಮೂಲಕ ಭಯೋತ್ಪಾದಕರು ಮತ್ತು ಭಯೋತ್ಪಾದಕರ ಬೆಂಬಲಿಗರ ನಡುವೆ ಸಂವಹನ, ಕ್ಷೇತ್ರ ಮಟ್ಟದಲ್ಲಿ ದಾಳಿಯ ಯೋಜನೆಗಳ ವಿತರಣೆ ಮತ್ತು ಮುಖ್ಯವಾಗಿ ಪಾಕಿಸ್ತಾನದಿಂದ ಸೂಚನೆಗಳನ್ನು ಕಳುಹಿಸಲಾಗುತ್ತಿತ್ತು ಎಂದು ಗುಪ್ತಚರ ಮೂಲಗಳು ಕಂಡುಕೊಂಡಿವೆ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಆ್ಯಪ್‌ಗಳ ಬಳಕೆ ಹೆಚ್ಚಾಗಿತ್ತು ಎಂದು ನಿರ್ಭಂಧಿಸಿದೆ.
ಸರ್ಕಾರವು ನಿರ್ಬಂಧಿಸಿದ ಅಪ್ಲಿಕೇಶನ್‌ಗಳಲ್ಲಿ ಕ್ರಿಪ್‌ವೈಸರ್, ಎನಿಗ್ಮಾ, ಸೇಫ್‌ಸ್ವಿಸ್, ವಿಕ್ರ್ಮೆ, ಮೀಡಿಯಾಫೈರ್, ಬ್ರಿಯಾರ್, ಬಿಚಾಟ್, ನಂಡ್‌ಬಾಕ್ಸ್, ಕೋನಿಯನ್, ಐಎಂಒ, ಎಲಿಮೆಂಟ್, ಸೆಕೆಂಡ್ ಲೈನ್, ಜಂಗಿ, ಥ್ರೀಮಾ ಸೇರಿವೆ ಎಂದು ಕೆಲವು ಮಾಧ್ಯಮ ವರದಿಗಳು ಹೇಳಿವೆ.
ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳ ಶಿಫಾರಸಿನ ಪ್ರಕಾರ, ಐಟಿ ಕಾಯಿದೆ, 2000 ರ ಸೆಕ್ಷನ್ 69 ಎ ಅಡಿಯಲ್ಲಿ ಈ ನಿಷೇಧವನ್ನು ಜಾರಿಗೊಳಿಸಲಾಗುತ್ತಿದೆ.
ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಮೊಬೈಲ್ ಅಪ್ಲಿಕೇಷನ್ ಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿರುವುದು ಹೊಸದೇನಲ್ಲ. ಈ ಹಿಂದೆ, ಭಾರತ ಸರ್ಕಾರವು ಹಲವಾರು ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು. ಅವುಗಳು “ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ಭಾರತದ ರಕ್ಷಣೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಪೂರ್ವಾಗ್ರಹವಾಗಿದೆ” ಎಂದು ಆರೋಪಿಸಿತ್ತು.
ಒಟ್ಟಾರೆಯಾಗಿ, ಕಳೆದ ಕೆಲವು ವರ್ಷಗಳಿಂದ ಸುಮಾರು 250 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದೆ. ಜೂನ್ 2020 ರಿಂದ, TikTok, Shareit, WeChat, Helo, Likee, UC News, Bigo Live, UC Browser, Xender, Camscanner, ಹಾಗೆಯೇ ಜನಪ್ರಿಯ ಮೊಬೈಲ್ ಗೇಮ್‌ಗಳಾದ PUBG ಮೊಬೈಲ್ ಮತ್ತು ಗರೆನಾ ಸೇರಿದಂತೆ 200 ಕ್ಕೂ ಹೆಚ್ಚು ಚೀನೀ ಅಪ್ಲಿಕೇಶನ್‌ಗಳು ನಿಷೇಧಿಸಲಾಗಿದೆ.