Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ರಾಜ್ಯದ ಯೋಜನೆಗಳು 100% ರೈತರಿಗೆ ತಲುಪಿವೆ: ಶಶಿಕಲಾ ಜೊಲ್ಲೆ

Facebook
Twitter
Telegram
WhatsApp

ವಿಜಯಪುರ : ರೈತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಿಸಾನ್ ಸಮ್ಮಾನ್, ಫಸಲ್ ಬಿಮಾ ಯೋಜನೆ ಹಾಗೂ ರೈತರ ಮಕ್ಕಳಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿದ್ಯಾನಿಧಿ ಯೋಜನೆಗಳು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ 100 ರಷ್ಟು ಫಲಾನುಭವಿಗಳಿಗೆ ತಲುಪಿವೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.

ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರು ಅವರು ಗೆಲ್ಲಬೇಕೆನ್ನುವುದು ಸಿಂಧಗಿ ಕ್ಷೇತ್ರದ ಜನರ ಅಪೇಕ್ಷೆಯಾಗಿದೆ ಎಂದು ಹೇಳಿದರು.

ರಮೇಶ ಭೂಸನೂರು ಅವರು ಶಾಸಕರಾಗಿದ್ದಾಗ ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಭವನ, ಶಾದಿಮಹಲ್, ಅಂಬೇಡ್ಕರ್ ಭವನ, ದೇವಸ್ಥಾನಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅವರು ಅಧಿಕಾರದಲ್ಲಿ ಇಲ್ಲದಿದ್ದರೂ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವು ನೀಡುವ ಕೆಲಸ ಮಾಡಿದ್ದಾರೆ.

ಈಗ ಅವರು ಮತ್ತೆ ಚುನಾವಣೆಯಲ್ಲಿ ಗೆದ್ದುಬಂದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಇನ್ನಷ್ಟು ಯೋಜನೆಗಳನ್ನು ತಂದು ಕ್ಷೇತ್ರದ ಅಭಿವೃದ್ಧಿ ಮಾಡಲು ಅನುಕೂಲವಾಗುತ್ತದೆ. ಈ ಚುನಾವಣೆಯಲ್ಲಿ ರಮೇಶ ಬೂಸನೂರು ಅವರು ಕನಿಷ್ಟ 25000 ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು. ಸ್ವಾತಂತ್ರ್ಯ ಬಂದು

ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ

  ಚಿತ್ರದುರ್ಗ, ಏ.24 : ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠವು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದೆ. ಕ್ಷೇತ್ರ ವ್ಯಾಪ್ತಿಯ ಪಾವಗಡ

error: Content is protected !!