ದೆಹಲಿ.ಜುಲೈ.24 : ನೀಟ್ ಯುಜಿ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಕಳೆದ 26 ದಿನಗಳಿಂದ ತೀವ್ರ ಹೋರಾಟ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್, ಕೊನೆಗೂ ಕೇಂದ್ರ ಸರ್ಕಾರದ ಭರವಸೆಯ ಮೇರೆಗೆ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ತೆರೆ ಎಳೆದಿದ್ದಾರೆ.
ಆರೋಗ್ಯ ತೀವ್ರ ಕ್ಷೀಣಿಸಿದ ಹಿನ್ನೆಲೆಯಲ್ಲಿ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಂಗ್ಚುಕ್ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಡಾ. ಜಿತೇಂದ್ರ ಸಿಂಗ್ ಹಾಗೂ ಲಡಾಖ್ನ ಅಪೆಕ್ಸ್ ಬಾಡಿಯ ಹಿರಿಯ ನಾಯಕರು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು. ಸರ್ಕಾರದ ಸಕಾರಾತ್ಮಕ ಸ್ಪಂದನೆಯ ನಂತರ ಸಚಿವರ ಸಮ್ಮುಖದಲ್ಲೇ ಅವರು ಉಪವಾಸ ಹಿಂಪಡೆದರು.
ತಮ್ಮ ಹೋರಾಟದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಸರ್ಕಾರ ನೀಡಿದ ಭರವಸೆಗಳು ಮತ್ತು ಮುಂದಿನ ನಡೆಗಳ ಬಗ್ಗೆ ಶೀಘ್ರದಲ್ಲೇ ವೀಡಿಯೊ ಮೂಲಕ ವಿವರಣೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಜೊತೆಗೆ, ಸಾರ್ವಜನಿಕರು ಹಾಗೂ ಹೋರಾಟಗಾರರು ಯಾವುದೇ ಕಾರಣಕ್ಕೂ ಹಿಂಸಾಚಾರಕ್ಕೆ ಆಸ್ಪದ ನೀಡದೆ ಶಾಂತಿಯುತವಾಗಿ ಸಾಗಬೇಕು ಎಂದು ಮನವಿ ಮಾಡಿದ್ದಾರೆ.
Just now in the presence of Union Ministers Sh. JP Nadda, Dr. Jitendra Singh and the senior leaders of Apex Body of Leh Ladakh I finally broke my fast after 26 days. Earlier 65 members of parliament from different political parties had visited or signed letters urging me to break… pic.twitter.com/RFCet7Oksy
— Sonam Wangchuk (@Wangchuk66) July 23, 2026
ಜೂನ್ 28 ರಂದು ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳ ವಿರುದ್ಧ ಧ್ವನಿ ಎತ್ತಿ ಸತ್ಯಾಗ್ರಹ ಆರಂಭಿಸಿದ್ದ ವಾಂಗ್ಚುಕ್ ಅವರ ಬೆಂಬಲಕ್ಕೆ ದೇಶಾದ್ಯಂತ ದೊಡ್ಡ ಮಟ್ಟದ ಸಾರ್ವಜನಿಕ ಬೆಂಬಲ ವ್ಯಕ್ತವಾಗಿತ್ತು. ವಿವಿಧ ರಾಜಕೀಯ ಪಕ್ಷಗಳ ಸುಮಾರು 65 ಸಂಸದರು ಇವರ ಜೀವ ರಕ್ಷಣೆಗಾಗಿ ಸತ್ಯಾಗ್ರಹ ಹಿಂಪಡೆಯುವಂತೆ ಪತ್ರದ ಮೂಲಕ ಕೋರಿದ್ದರು. ಆರಂಭದಲ್ಲಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿದ್ದ ಅವರನ್ನು, ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಅವರ ಮನವಿಯಂತೆ ಹೈಕೋರ್ಟ್ ನಿರ್ದೇಶನದ ಮೇರೆಗೆ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ವಾಂಗ್ಚುಕ್ ಅವರ ಜೀವ ಬೆಲೆಬಾಳುವಂತದ್ದು, ದೇಶಕ್ಕೆ ಅವರ ಸೇವೆ ಅಗತ್ಯವಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಸೇರಿದಂತೆ ಹಲವು ಮುಖಂಡರು ಕಾಳಜಿ ವ್ಯಕ್ತಪಡಿಸಿದ್ದರು. ಈ ನಡುವೆ ನೀಟ್ ಅಕ್ರಮ ಖಂಡಿಸಿ ಸಿಜೆಪಿ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











