ಬೆಂಗಳೂರು: ಕಳೆದ ಕೆಲವು ದಿನಗಳಿಂದ ಪಿಎಫ್ಐ ಸಂಘಟನೆಯ ಮುಖಂಡರ ಮೇಲೆ ದಾಳಿ ನಡೆಸಲಾಗಿದೆ. ಹಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ವಿಚಾರಣೆಯಲ್ಲಿ ಕೆಲವೊಂದು ಭಯಾನಕವೆನಿಸುವಂತ ಮಾಹಿತಿಗಳು ಲಭ್ಯವಾಗಿದೆ. ಈ ಬೆನ್ನಲ್ಲೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂದಿದ್ದು, ಐದು ವರ್ಷಗಳ ಕಾಲ ಪಿಎಫ್ಐ ಸಂಘನಟನೆಯನ್ನು ಬ್ಯಾನ್ ಮಾಡಿದೆ.
ಕೇಂದ್ರ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದು, ತಮ್ಮ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತ ಮಾಡುತ್ತೇವೆ. ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಬೇಕು ಎಂಬುದು ಸಿಪಿಐ, ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷದವರ ಮನವಿ ಕೂಡ ಆಗಿತ್ತು. ಬಹುಕಾಲದ ಬೇಡಿಕೆಯಂತೆಯೇ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದಿದ್ದಾರೆ.
ಪಿಎಫ್ಐ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿತ್ತು. ಹಿಂಸಾಚಾರದಲ್ಲಿ ತೊಡಗಿತ್ತು. ಕೆಲವು ಇಂಪ್ ಗಳು ಗಡಿಯುದ್ದಕ್ಕೂ ಹೋಗಿ ತಮ್ಮದೇ ಆದ ತರಬೇತಿಯನ್ನು ಪಡೆದಿದ್ದರು. ಈ ಸಂಘಟನೆಯನ್ನು ನಿಷೇಧಿಸುವ ಸಮಯ ಬಂದಿದೆ. ಗೃಹ ಇಲಾಖೆ ಸರಿಯಾದ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.
ಇನ್ನು ಪಿಎಫ್ಐ ಬ್ಯಾನ್ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕೇಂದ್ರ ಸರ್ಕಾರದ ಮಹತ್ವದ ಬೆಳವಣಿಗೆಯೊಂದರಲ್ಲಿ ಪಿಎಫ್ಐ ಹಾಗೂ ಅದರ ಸಹವರ್ತಿ ಸಂಸ್ಥೆಗಳನ್ನು ಐದ ವರ್ಷಗಳ ಕಾಲ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನೀತಿಯನ್ನು ನಾವೂ ಸ್ವಾಗತಿಸುತ್ತೇನೆ. ದೇಶದಲ್ಲಿ ಸೌಹಾರ್ದತೆ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್ಐ ಮತ್ತು ಅದರ ಸಹವರ್ತಿ ಸಂಘಟನೆಗಳ ವಿರುದ್ಧ ಕೇಂದ್ರ ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿದೆ ಎಂದಿದ್ದಾರೆ.