Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ : ಶೇಕಡ 3ರಷ್ಟು ಡಿಎ ಹೆಚ್ಚಳ

---Advertisement---

ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಅದುವೇ ಡಿಎ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದು ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಕೊಟ್ಟ ಸುದ್ದಿಯಾಗಿದೆ. ಈ ವರ್ಷದ ಜುಲೈ 1ರಿಂದಲೇ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಅನ್ನು ಶೇಕಡ 3ರಷ್ಟು ಏರಿಕೆ ಮಾಡಲಾಗಿದೆ.

ಇಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಕ್ಯಾಬಿನೆಟ್ ಸಭೆ ನಡೆದಿದೆ. ಆ ಸಭೆಯಲ್ಲಿ ತುಟ್ಟಿಭತ್ಯೆ ಏರಿಕೆಯ ಬಗ್ಗೆ ಚರ್ಚೆಗಳಾಗಿದ್ದು, ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ಕೇಂದ್ರ ಸರ್ಕಾರದ ಒಂದು ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ಲಾಭವಾಗಲಿದೆ. ದೇಶದಲ್ಲಿ ಹಣದುಬ್ಬರ ಹಾಗೂ ಜೀವನ ವೆಚ್ಚ ಏರಿಕೆಗೆ ಅನುಗುಣವಾಗಿ ತುಟ್ಟಿಭತ್ಯೆಯನ್ನು ಏರಿಕೆ ಮಾಡಲಾಗುತ್ತೆ. ಕೇಂದ್ರ ಸರ್ಕಾರದಲ್ಲಿ 50 ಲಕ್ಷ ಹಾಲಿ ಸೇವೆ ಸಲ್ಲಿಸುತ್ತಿರುವ ನೌಕರರಿದ್ದರೆ, ಇನ್ನೂ 50 ಲಕ್ಷ ಪಿಂಚಣಿದಾರರು ಇದ್ದಾರೆ. ಗ್ರಾಹಕರ ಬೆಲೆ ಸೂಚ್ಯಂಕದ ಆಧಾರದ ಮೇಲೆ ಡಿಎ ಏರಿಕೆ ಮಾಡಲಾಗುತ್ತೆ. ವರ್ಷದಲ್ಲಿ ಎರಡು ಬಾರಿ ಕೇಂದ್ರ ಸರ್ಕಾರ ಡಿಎ ಏರಿಕೆ ಮಾಡುತ್ತೆ.

ಪ್ರತಿವರ್ಷ ಜನವರಿ ಮತ್ತು ಜುಲೈ ತಿಂಗಳಿನಲ್ಲಿ ಡಿಎ ಏರಿಕೆ ಮಾಡಲಾಗುತ್ತೆ. ಇನ್ನೂ ಈ ವರ್ಷದಲ್ಲಿ ಮಾರ್ಚ್ ತಿಂಗಳಿನಲ್ಲಿ ಶೇಕಡ 2 ರಷ್ಟು ಡಿಎ ಏರಿಕೆ ಮಾಡಲಗಿತ್ತು. ಕೇಂದ್ರ ಸರ್ಕಾರದ ಉದ್ಯೋಗಿಗಳ ಬೇಸಿಕ್ ಸ್ಯಾಲರಿಯ ಶೇಕಡ 53 ರಿಂದ ಶೇಕಡ 55 ಕ್ಕೆ ಏರಿಕೆ ಮಾಡಲಾಗಿತ್ತು. ಈಗ ಶೇಕಡ 3ರಷ್ಟು ಡಿಎ ಏರಿಕೆ ಮಾಡಲಾಗಿದೆ. ಇದರಿಂದ ಟೇಕ್ ಹೋಂ ಸ್ಯಾಲರಿ ಕೂಡ ಹೆಚ್ಚಾದಂತೆ ಆಗಿದೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...