ನವದೆಹಲಿ: ಈ ಬಾರಿಯ ಕನ್ನಡ ರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧ ಚಿತ್ರಕ್ಕೆಅನುಮತಿ ನಿರಾಕರಿಸಲಾಗಿತ್ತು. ಈ ಬಗ್ಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಪ್ರಧಾನಿ ಮೋದೊ ಅವರಿಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅನುಮತಿ ಸಿಕ್ಕಿದೆ.
ಕರ್ನಾಟಕದ ನಾರಿಶಕ್ತಿ ಸ್ತಬ್ಧಚಿತ್ರಕ್ಕೆ ಅನುನತಿ ಸಿಕ್ಕಿದೆ. ಮೊದಲ ಎರಡು ಸುತ್ತಿನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆಯಾಗಿತ್ತು. ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಕರ್ನಾಟಕದ ಸ್ತಬ್ಧ ಚಿತ್ರವನ್ನು ನಿರಾಕರಣೆ ಮಾಡಲಾಗಿತ್ತು. ಕಳೆದ 13 ವರ್ಷಗಳಿಂದ ಕರ್ನಾಟಕ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳುತ್ತಾ ಇತ್ತು. ಕಳೆದ ಬಾರಿ ಎರಡನೇ ಸ್ಥಾನ ಪಡೆದುಕೊಂಡಿತ್ತು.
ಕರ್ನಾಟಕ ಪ್ರತಿನಿಧಿಸಿದ್ದ ಮಹಿಳಾ ಸಬಲೀಕರಣ ವಿಷಯಾಧಾರಿತ ಸ್ತಬ್ಧಚಿತ್ರ ಆರಂಭದ ಕೆಲವು ಸುತ್ತಿನಲ್ಲಿ ಆಯ್ಕೆಯಾಗಿತ್ತು. ಸ್ತಬ್ಧ ಚಿತ್ರದ ವಿನ್ಯಾಸ ಹಾಗೂ ಸಂಗೀತ ತಜ್ಞರ ಒಪ್ಪಿಗೆಯೂ ಸಿಕ್ಕಿತ್ತು.