Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಸ ರಾಷ್ಟ್ರೀಯ ಸಹಕಾರ ನೀತಿ ಬಗ್ಗೆ ಪ್ರಭಾ ಮಲ್ಲಿಕಾರ್ಜುನ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸರ್ಕಾರ

---Advertisement---

ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಕೇಂದ್ರ ಸರ್ಕಾರಕ್ಕೆ ಪ್ರಶ್ನೆಗಳನ್ನ ಕೇಳಿದ್ದರು. ಹೊಸ ರಾಷ್ಟ್ರೀಯ ಸಹಕಾರ ನೀತಿಯನ್ನು ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿಗೆ ತಂದಿರುವುದೇ ಅದರ ಅನುಷ್ಠಾನ ಮಾರ್ಗಸೂಚಿಗಳು, ಕಾಲಮಿತಿಗಳು ಹಾಗೂ ಅಳೆಯಬಹುದಾದ ಗುರಿಗಳನ್ನು ಪ್ರಕಟಿಸಿರುವರೇ ಎಂಬುದರ ಕುರಿತು ಮಾಹಿತಿ ಕೇಳಿದ್ದಾರೆ. ಜೊತೆಗೆ ಈ ನೀತಿ ರೂಪಿಸುವ ವೇಳೆ ರಾಜ್ಯ ಸರ್ಕಾರಗಳು ಮತ್ತು ಸಹಕಾರ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆಯೇ, ಸಹಕಾರ ಸಂಘಗಳ ಆಡಳಿತ, ಲೆಕ್ಕಪರಿಶೋಧನೆ, ಸಾಲ ಸೌಲಭ್ಯ ಮತ್ತು ಡಿಜಿಟಲೀಕರಣದಲ್ಲಿ ಸುಧಾರಣೆಗಳಾಗಿದೆಯೇ ಎಂಬ ಬಗ್ಗೆ ವಿವರವನ್ನು ಕೇಳಿದ್ದರು.

ರಾಷ್ಟ್ರೀಯ ಸಹಕಾರ ನೀತಿ 2025 ಅನ್ನು 24 ಜುಲೈ 2025 ರಂದು ಆರಂಭಿಸಲಾಗಿದೆ. ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾರ್ಗದರ್ಶಿಯಾಗುವ ಈ ನೀತಿಯಲ್ಲಿ 6 ತಂತ್ರಾತ್ಮಕ ಸ್ತಂಭಗಳು, 16 ಉದ್ದೇಶಗಳು ಮತ್ತು 83 ಶಿಫಾರಸುಗಳು ಒಳಗೊಂಡಿವೆ. ರಾಜ್ಯಗಳು ತಮ್ಮ ಸಹಕಾರ ನೀತಿಗಳನ್ನು ಈ ಹೊಸ ನೀತಿಗೆ ಅನುಗುಣವಾಗಿ ರೂಪಿಸಿಕೊಳ್ಳಲು ಪ್ರೋತ್ಸಾಹಿಸಲಗಿದೆ ಎಂಬುದನ್ನು ಕೇಂದ್ರ ಸರ್ಕಾರ ತಿಳಿಸಿದೆ.

ಇನ್ನು ಈ ನೀತಿ ಇತ್ತೀಚೆಗೆ ಜಾರಿಗೆ ಬಂದಿರುವ ಕಾತಣ ಅದರ ಸ್ಪಷ್ಟ ಪರಿಣಾಮಗಳನ್ನು ಅಳೆಯಲು ಇನ್ನೂ ಸಮಯ ಬೇಕಾಗಿದೆ. ನೀತಿಯ ಅನುಷ್ಠಾನ ಮತ್ತು ಪ್ರಗತಿಯನ್ನು ಪರಿಶೀಲಿಸಲು ಇಂಪ್ಲಿಮೆಂಟೇಷನ್ ಸೆಲ್ಸ್ ಹಾಗೂ ಪಾಲಿಸಿ ಇಂಪ್ಲಿಮೆಂಟೇಷನ್ ಮತ್ತು ಮಾನಿಟರಿಂಗ್ ಕಮಿಟಿ ರಚನೆ ಮಾಡಲಾಗಿದೆ ಎಂಬ ಬಗ್ಗೆಯೂ ಕೇಂದ್ರ ಸರ್ಕಾರ ಉತ್ತರವನ್ನು ನೀಡಿದೆ. ಸುರೇಶ್ ಪ್ರಭು ಅಧ್ಯಕ್ಷತೆಯಲ್ಲಿ 48 ಸದಸ್ಯರ ಸಮಿತಿ ರಚಿಸಲಾಗಿದ್ದು, 17 ಸಭೆಗಳು ಹಾಗೂ 4 ಪ್ರಾದೇಶಿಕ ಕಾರ್ಯಗಾರಗಳ ಮೂಲಕ ಒಟ್ಟು 648 ಸಲಹೆಗಳನ್ನು ರಚಿಸಲಾಗಿದೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...