ಬೆಂಗಳೂರು: ಕೇಂದ್ರ ಸರ್ಕಾರ ಈ ಕೂಡಲೇ ದೇಶದ ಜನರ ಕ್ಷಮೆ ಕೇಳೆಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧ ಚಿತ್ರವನ್ನ ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕಾರ ಮಾಡಿದೆ. ಹೀಗಾಗಿ ದೇಶದ ಜನರ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಕ್ಷಮೆ ಕೇಳಬೇಕು. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು.
ನಾನು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರ ಕೈಗೊಂಡೆ. ಇದರಿಂದಾಗಿ ಇಂದು ರಾಜ್ಯದ ಮೂಲೆಮೂಲೆಗೆ ಗುರುಗಳ ಚಿಂತನೆಯ ಸಂದೇಶ ತಲುಪುತ್ತಿದೆ ಎಂಬ ಹೆಮ್ಮೆ ಮತ್ತು ತೃಪ್ತಿ ನನ್ನದು.
ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ @narendramodi ಇನ್ನೂ ಪ್ರತಿಕ್ರಿಯಿಸದೆ
ಇರುವುದು ಆಶ್ಚರ್ಯಕರ. ಇದನ್ನು ಹೇಗೆ ಅರ್ಥೈಸಬೇಕು? ಈ ಅವಮಾನಕ್ಕೆ ಸಹಮತ ಇದೆಯೆಂದೇ?.
ಹಿಂದೂ ಧರ್ಮದ ಸುಧಾರಕ
ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ
ಅವಕಾಶ ನಿರಾಕರಿಸಿ ಅವಮಾನಿಸಿರುವುದು ‘ಹಿಂದು ಹೃದಯ ಸಾಮ್ರಾಟ’ ಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ @narendramodi ಅವರ ಗಮನಕ್ಕೆ ಇನ್ನೂ ಬಂದಿಲ್ಲವೇ? ಎಂದು ಸರಣಿ ಟ್ವೀಟ್ ಮಾಡಿದ್ದಾರೆ.