ಅಮೃತ್ ಸರೋವರ, ದ್ರವ ತ್ಯಾಜ್ಯ ನಿರ್ವಹಣೆ: ಸಮರ್ಪಕವಾಗಿ ಅನುಷ್ಠಾನಗೊಳಿಸಿ : ಡಾ.ಕೆ.ನಂದಿನಿದೇವಿ ಸೂಚನೆ

ಚಿತ್ರದುರ್ಗ, (ಜೂ.13) : ಸಮಗ್ರ ಕೆರೆ ಅಭಿವೃದ್ಧಿ, ಅಮೃತ ಸರೋವರ, ಘನ ತ್ಯಾಜ್ಯ ನಿರ್ವಹಣೆ ಹಾಗೂ ದ್ರವ ತ್ಯಾಜ್ಯ ನಿರ್ವಹಣೆ ಕುರಿತು  ತಾಂತ್ರಿಕ ಸಲಹೆಗಳನ್ನು ಅಳವಡಿಸಿಕೊಂಡು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್,  ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಮೃತ್ ಸರೋವರ ಮತ್ತು ನರ್ಸರಿ ಕುರಿತು ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆ ಹಾಗೂ ದ್ರವ ತ್ಯಾಜ್ಯ ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಅವರು ಅಮೃತ್ ಸರೋವರ ಮತ್ತು ನರ್ಸರಿ ಕುರಿತು ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆ ಹಾಗೂ ದ್ರವ ತ್ಯಾಜ್ಯ ನಿರ್ವಹಣೆ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು.

ಹೊಸದುರ್ಗ ತಾಲ್ಲೂಕಿನ ತಾಂತ್ರಿಕ ಸಂಯೋಜಕರಾದ ಸಂತೋಷ್ ಮಾತನಾಡಿ, ಸಮಗ್ರ ಕೆರೆ ಅಭಿವೃದ್ಧಿ ಮತ್ತು ಅಮೃತ ಸರೋವರ ಕುರಿತು ತಾಂತ್ರಿಕ ತರಬೇತಿಯನ್ನು ನೀಡಿದರು.

ರಾಜ್ಯ ಘನತ್ಯಾಜ್ಯ ಮತ್ತು ದ್ರವತ್ಯಾಜ್ಯ ಸಮಾಲೋಚಕರಾದ ವಿನೋದ್ ಕುಮಾರ್ ಬೂದು ನೀರು ನಿರ್ವಹಣೆ ಹಾಗೂ ಕಾಮಗಾರಿಗಳ ಅನುಷ್ಠಾನ ಕುರಿತು ತಾಂತ್ರಿಕ ಸಲಹೆಗಳನ್ನು ನೀಡಿದರು. ನಂತರ ಮೊಳಕಾಲ್ಮೂರು ತಾಲ್ಲೂಕಿನ ತಾಂತ್ರಿಕ ಸಂಯೋಜಕರಾದ ಮಂಜುನಾಥ್, ಬೂದು ನೀರು ನಿರ್ವಹಣೆ ಹಾಗೂ ಅನುಷ್ಠಾನ ಗೊಂಡಿರುವ ಕಾಮಗಾರಿಗಳ ಕುರಿತು ತರಬೇತಿಯನ್ನು ನೀಡಿದರು, ನಂತರ ಅಂತರ್ಜಲ ಚೇತನ ಜಿಲ್ಲಾ ಸಂಯೋಜಕಾರದ ಬೈಲಪ್ಪ ಅವರು ಅಂತರ್ಜಲ ಚೇತನ ಕುರಿತು ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕ ಮಹಂತೇಶಪ್ಪ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರಪ್ರಸಾದ್, ವಿಶ್ವನಾಥ್, ಗಂಗಣ್ಣ, ಸಹಾಯಕ ನಿರ್ದೇಶಕರಾದ ಧನಂಜಯ್, ಸಂತೋಷ್ ಕುಮಾರ್, ತಿಪ್ಪೇಸ್ವಾಮಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಕಾರ್ಯಪಾಲಕ ಇಂಜಿನಿಯರ್ ಭಾರತಿ, ಸಹಾಯಕ ಅಭಿಯಂತರರಾದ ಕಾವ್ಯ, ನರೇಗಾ ತಾಂತ್ರಿಕ ಸಹಾಯಕರು, ಜಿಲ್ಲಾ ಮತ್ತು ತಾಲ್ಲೂಕು ಸಮಾಲೋಚಕರು, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಜಿಲ್ಲಾ ಐಇಸಿ, ಹೆಚ್‍ಆರ್‍ಡಿ ಸಮಾಲೋಚಕರು, ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು ಇದ್ದರು.

suddionenews

Recent Posts

ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಪದೇ ಪದೇ ಕಿರಿಕಿರಿ

ಈ ರಾಶಿಯವರಿಗೆ ಹಣಕಾಸಿನ ವಿಚಾರಕ್ಕಾಗಿ ಟೆನ್ಷನ್, ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಪದೇ ಪದೇ ಕಿರಿಕಿರಿ, ಬುಧವಾರದ…

44 minutes ago

ಕಾಯಕ ಪ್ರಜ್ಞೆ ಮೈಗೂಡಿಸಿಕೊಂಡರೆ ಬಸವ ತತ್ವ ಪಾಲಿಸಿದಂತೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…

10 hours ago

ಮಾರ್ಚ್ 01 ರಿಂದ 09 ರವರೆಗೆ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ : ಬಸವ ರಮಾನಂದ ಮಹಾಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago