Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಹುಗ್ರಾಮ ಕುಡಿಯುವ ನೀರು ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ : ಎಸ್.ಜೆ.ಸೋಮಶೇಖರ್

---Advertisement---

 

ಚಿತ್ರದುರ್ಗ. (ನ.13) : ಹಿರಿಯೂರು ತಾಲ್ಲೂಕಿನ ವಿ.ವಿ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿ.ವಿ.ಸಾಗರದಿಂದ ಹೊಳಲ್ಕೆರೆ ತಾಲ್ಲೂಕಿನ ಜನವಸತಿಗಳಿಗೆ ಬರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನಯಡಿ ಬರುವ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಪರಿಶೀಲನೆ ನಡೆಸಿದರು.

ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ವಿನ್ಯಾಸ, ನಿರ್ಮಾಣ, ನಿರ್ವಹಣೆ ಮತ್ತು ವರ್ಗಾವಣೆ ವಿಧಾನದ ಮೂಲಕ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ 215 ಜನ ವಸತಿ ಮತ್ತು ಹೊಳಲ್ಕೆರೆ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಯೋಜನೆ ಇದರ ಅಂದಾಜು ಮೊತ್ತ 367 ಕೋಟಿ  ಈ ಕಾಮಗಾರಿಯನ್ನು ಮಂಗಳೂರಿನ ಅಮರ್ ಇನ್‍ಪ್ರಾ ಪ್ರಾಜೆಕ್ಟ್‍ಗೆ ವಹಿಸಿದ್ದು. ಈ ಕಾಮಗಾರಿಯಲ್ಲಿ 23 ಎಂ.ಎಲ್.ಡಿ ಶುದ್ಧ ಕುಡಿಯುವ ನೀರಿನ ಘಟಕ, 14- ಝಡ್. ಬಿ.ಟಿ, 2-ಎಂ.ಬಿ.ಟಿ ಹಾಗೂ 541 ಕಿ.ಮೀ ಪೈಪ್ ಲೈನ್ ಮಾರ್ಗ ಅಳವಡಿಕೆಗಳಿದ್ದು, ಈ ಕಾಮಗಾರಿಯಲ್ಲಿ ಶೇ.75 ರಷ್ಟು ಶುದ್ದ ಕುಡಿಯುವ ನೀರಿನ ಘಟಕ ಹಾಗೂ 480 ಕಿ.ಮೀ ಪೈಪ್ ಲೈನ್ ಮಾರ್ಗ ಅಳವಡಿಕೆಯ ಕಾಮಗಾರಿಯು ಪೂರ್ಣಗೊಂಡಿದೆ ಹಾಗೂ ವಾಣಿವಿಲಾಸ ಸಾಗರದಲ್ಲಿ ಜಾಕ್ವೆಲ್ ಕಾಮಗಾರಿಯ ಪಿಲ್ಲಿಂಗ್ ಮೆಥಡ್ ಕೆಲಸ ಪ್ರಗತಿಯಲಿದ್ದು, ಈ ಸಂಪೂರ್ಣ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ಕಾರ್ಯ ಪಾಲಕ ಇಂಜಿನಿಯರ್ ಬಸಣ್ಣಗೌಡ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನೀಲಕಂಠಪ್ಪ, ಎ.ಇ ಕೃಷ್ಣಮೂರ್ತಿ, ಜೆ.ಇ ಶಿವಕುಮಾರ ಹಾಗೂ ಅಮರ್ ಇನ್‍ಪ್ರಾ ಪ್ರಾಜೆಕ್ಟ್ ಕಂಪನಿಯ ಪ್ರಾಜೆಕ್ಟ್ ಮ್ಯಾನೇಜರ್ ಸೆಲ್ವ ಶೇಖರ್ ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...