Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಇಟಿ ಕನ್ನಡ ಭಾಷೆ ಪರೀಕ್ಷೆ ಅಪ್ಡೇಟ್ ; ಏ.18ಕ್ಕೆ ನಡೆಯಲ್ಲ..!

---Advertisement---

ಬೆಂಗಳೂರು; ಸಿಇಟಿ ಕನ್ನಡ ಭಾಷೆಯ ಪರೀಕ್ಷೆ ಬರೆಯಬೇಕು ಎಂದುಕೊಂಡವರು ಈ ಮಾಹಿತಿಯ ಕಡೆಗೆ ಗಮನ ಹರಿಸಿ. ಅದರಲ್ಲೂ ಹೊರನಾಡು ಹಾಗೂ ಗಡಿನಾಡು ಕನದನಡಿಗ ಅಭ್ಯರ್ಥಿಗಳು ಈ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಆದರೆ ಪರೀಕ್ಷೆ ಮೂರು ದಿನ ಮುಂಚಿತವಾಗಿಯೇ ನಡೆಯಲಿದೆ. ಏಪ್ರಿಲ್ 18ಕ್ಕೆ ನಡೆಯಬೇಕಿದ್ದ ಪರೀಕ್ಷೆ ಇದೀಗ ಏಪ್ರಿಲ್ 15ಕ್ಕೆ ಹಿಂದೂಡಿಕೆಯಾಗಿದೆ.

ಏಪ್ರಿಲ್ 18ರಂದು ಗುಡ್ ಫ್ರೈಡ್ ಇದೆ. ಹೀಗಾಗಿ ಅಂದು ರಜಾ ದಿನವಾಗಿರುವ ಕಾರಣ ಪರೀಕ್ಷೆ ದಿನಾಂಕದಲ್ಲಿ ಬದಲಾವಣೆಯನ್ನು ತರಲಾಗಿದೆ. ಸರ್ಕಾರದ ನಿರ್ಧಾರದಂತೆ ಪರೀಕ್ಷೆ ದಿನಾಂಕವನ್ನ ಬದಲಾಯಿಸಲಾಗಿದ್ದು, ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿಯನ್ನು ಹಂಚಿಕೊಂಡಿದೆ. ಹಾಗಾದ್ರೆ ಪರೀಕ್ಷೆ ಯಾವೆಲ್ಲಾ ಕೇಂದ್ರದಲ್ಲಿ ನಡೆಯುತ್ತದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಅಂದು ಬೆಳಗ್ಗೆ 10.30ರಿಂದ 11.30ರವರೆಗೆ ಪರೀಕ್ಷೆಗಳು ನಡೆಯಲಿವೆ. ಇದರ ಜೊತೆಗೆ ಸಿಇಟಿಯ ಉಳಿದ ಪರೀಕ್ಚೆಗಳು ನಿಗದಿಯಾಗಿವೆ. ಅಂದ್ರೆ ಏಪ್ರಿಲ್ 16 ಮತ್ತು 17ರಂದು ಉಳಿದ ಪರೀಕ್ಷೆಗಳು ನಿಗದಿಯಾಗಿದ್ದು, ಅದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಅಂದಿನ ಪರೀಕ್ಷೆಗಳು ಅಂದೇ ನಡೆಯುತ್ತವೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವೂ ಈ ಬಗ್ಗೆ ಮಾಹಿತಿಯನ್ನ ಹಂಚಿಕೊಂಡಿದೆ.

ಸದ್ಯ ಸಿಇಟಿ ಎಂಬುದು ಮಕ್ಕಳ ಮುಂದಿನ ವಿಧ್ಯಾಭ್ಯಾಸಕ್ಕೆ ಬಹಳ ಮುಖ್ಯವಾಗಿ ಬೇಕಾದದ್ದಾಗಿದೆ. ಸಿಇಟಿಯಲ್ಲಿ ರ್ಯಾಂಕಿಂಗ್ ಪಡೆಯುವುದಕ್ಕೋಸ್ಕರ ಸಾಕಷ್ಟು ಶ್ರಮವಹಿಸುತ್ತಾರೆ. ಪರೀಕ್ಷೆಗೆ ಇನ್ನು ಸಮಯವೇನೋ ಇದೆ. ಆದರೆ ಫಿಕ್ಸ್ ಆಗಿರೋದಕ್ಕಿಂತ ಮೊದಲೇ ಅದರಲ್ಲೂ ಮೂರು ದಿನ ಮುಂಚಿತವಾಗಿಯೇ ಪರೀಕ್ಷೆ ನಡೆಯಲಿದೆ‌. ಹೀಗಾಗಿ ವಿದ್ಯಾರ್ಥಿಗಳು ಮತ್ತಷ್ಟು ಗಮನ ಹರಿಸಿ ಓದಬೇಕಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment