ಬೆಂಗಳೂರು; ಇಂದು ಹಲವು ದಿನಗಳಿಂದ ಕಾಯ್ತಾ ಇದ್ದಂತ ಫಲಿಅಂಶ ಪ್ರಕಟವಾಗಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಫಲಿತಾಂಶವನ್ನ ಬಿಡುಗಡೆ ಮಾಡಿದ್ದಾರೆ. ಪತ್ರಿಕಾಗೋಷ್ಠಿ ಮಾಡುವ ಮೂಲಕ ಫಲಿತಾಂಶವನ್ನ ಪ್ರಕಟಿಸಿದ್ದಾರೆ.
ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಅದರಲ್ಲಿ 3,11.000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನ ಬರೆದಿದ್ದರು. ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತನ್ಯ ಸಿಬಿಎಸ್ಇ ಶಾಲೆಯ ಭವೇಶ್ ಜಯಂತಿ ಮೊದಲ ರ್ಯಾಂಕ್ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ ಎರಡನೇ ರ್ಯಾಂಕ್ ಗಳಿಸಿದ್ದಾರೆ. ದಿನೇಶ್ ಗೋಮತಿ ಶಂಕರ್ ಅರುಣಾಚಲಂ ಮೂರನೇ ರ್ಯಾಂಕ್ ಗಳಿಸಿದ್ದಾರೆ.
ಅಗ್ರಿಕಲ್ಚರ್ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ ಪಡೆದಿದ್ದು, ಸಾಯಿ ಶರವಣ ಪಂಡಿತ್ ದ್ವಿತೀಯ ಸ್ಥಾನ ಹಾಗೂ ಸುಚಿತ್ ಪಿ. ಪ್ರಸಾದ್ ಮೂರನೇ ಸ್ಥಾನ ಗಳಿಸಿದ್ದಾರೆ. ಯಲಹಂಕದ ನಾರಾಯಣ ಇ-ಟೆಕ್ನೋ ಕಾಲೇಜಿನ ಹರೀಶ್ ರಾಜ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಹೆಚ್ಎಸ್ಆರ್ ಲೇಔಟ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ, ಆತ್ರೇಯ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಮಂಗಳೂರಿನ ವಳಚ್ಚಿಲ್ ನ ಎಕ್ಸ್ ಪರ್ಟ್ ಕಾಲೇಜಿನ ಶಾಪಲ್ ಶೆಟ್ಟಿ ಮೂರನೇ ರ್ಯಾಂಕ್ ಗಳಿಸಿದ್ದಾರೆ. ವೆಟರ್ನರಿ ವಿಭಾಗದಲ್ಲಿ ರಕ್ಷಿತಾ ವಿ.ಪಿ ಪ್ರಥಮ ಸ್ಥಾನ, ನಂದನ್ ದ್ವಿತೀಯ ಸ್ಥಾನ, ಭುವನೇಶ್ವರಿ ತೃತೀಯ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ್ಯಾಂಕ್ ಪಡೆದ ಮಕ್ಕಳಿಗೆ ಕಾಲೇಜುಗಳು ಸಹ ಹಾರೈಸಿದ್ದಾರೆ. ಪೋಷಕರಂತೂ ಫುಲ್ ಖುಷಿಯಾಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







