ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವು ಇಂದು (ಜೂನ್ 6, ಶನಿವಾರ) ಅಧಿಕೃತವಾಗಿ ಪ್ರಕಟಗೊಳ್ಳುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕೆಇಎ ಸಹ ಅಧ್ಯಕ್ಷರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ರಿಸಲ್ಟ್ ವಿವರಗಳನ್ನು ಬಿಡುಗಡೆ ಮಾಡಲಿದ್ದಾರೆ. ತದನಂತರ, ಮಧ್ಯಾಹ್ನ 2 ಗಂಟೆಯ ಬಳಿಕ ವಿದ್ಯಾರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಎಚ್. ಪ್ರಸನ್ನ ಅವರು ಸ್ಪಷ್ಟಪಡಿಸಿದ್ದಾರೆ.
ಕಳೆದ ಏಪ್ರಿಲ್ 23 ಮತ್ತು 24 ರಂದು ನಡೆದಿದ್ದ ಈ ಪ್ರತಿಷ್ಠಿತ ಪರೀಕ್ಷೆಗೆ ರಾಜ್ಯಾದ್ಯಂತ ಭಾರಿ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 3,30,479 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 1,86,099 ಬಾಲಕಿಯರು ಹಾಗೂ 1,44,380 ಬಾಲಕರು ಸೇರಿದ್ದಾರೆ.

ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಡೈರೆಕ್ಟ್ ಲಿಂಕ್ಸ್:
ವಿದ್ಯಾರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಸರ್ಕಾರಿ ವೆಬ್ಸೈಟ್ ಲಿಂಕ್ಗಳ ಮೂಲಕ ತಮ್ಮ ರಿಸಲ್ಟ್ ಅನ್ನು ಸುಲಭವಾಗಿ ಪಡೆದುಕೊಳ್ಳಬಹುದು:
cetonline.karnataka.gov.in/kea/
keaonline.karnataka.gov.in/ugcet%202026%20results/
keaonline.karnataka.gov.in/ugcet%202026%20result/







