Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

5 ಕೋಟಿ ಕೇಸ್ ಗೋವಿಂದ ಬಾಬುಗೆ ಮುಳುವಾಗುತ್ತಾ..?

---Advertisement---

 

ಬೆಂಗಳೂರು: ಎಂಎಲ್ಎ ಟಿಕೆಟ್ ಗಾಗಿ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ಗೋವಿಂದ ಬಾಬು ಪೂಜಾರಿ ಐದು ಕೋಟಿ ನೀಡಿದ್ದರು ಎಂಬ ಆರೋಪದ ಮೇಲೆ ಹಲವರನ್ನು ಬಂಧನ ಮಾಡಲಾಗಿದೆ. ಇದೀಗ ಆ ಕೇಸ್ ಗೆ ಸಂಬಂಧಿಸಿದಂತೆ ಗೋವಿಂದ ಬಾಬುಗೆ ಕಂಟಕ ಶುರುವಾಗುವ ಸಾಧ್ಯತೆ ಇದೆ.

ಗೋವಿಂದ ಬಾಬು ವಿರುದ್ಧ ಹವಾಲಾ ಟ್ರಾನ್ಸಾಕ್ಷನ್ ಮಾಡಿರುವ ಆರೋಪ ಕೇಳಿ ಬಂದಿದೆ. ಗೋವಿಂದ ಬಾಬಿ ಅವರು ಹವಾಲಾ ವ್ಯವಹಾರ ನಡೆಸಿದ್ದಾರೆ ಎಂದು ಹಿರಿಯ ವಕೀಲ ನಟರಾಜ್ ಶರ್ಮಾ ಹೇಳಿದ್ದಾರೆ. ಹೈಕೋರ್ಟ್ ಗೆ ಈ ಸಂಬಂಧ ದೂರು ಸಲ್ಲಿಸಿದ್ದಾರೆ.

ಬಿಜೆಪಿ ಟಿಕೆಟ್ ಪಡೆಯಲು ಐದು ಕೋಟಿ ನೀಡಿದ್ದಾರೆ. ಎರಡು ಕೋಟಿಗಿಂತ ಹೆಚ್ಚು ಕ್ಯಾಶ್ ವ್ಯವಹಾರ ನಡೆಸುವಂತಿಲ್ಲ.‌ ಆದರೂ ಐದು ಕೋಟಿ ಕ್ಯಾಶ್ ಕೊಟ್ಟಿದ್ದಾರೆ. ಪೊಲೀಸರಿಗೆ ನೀಡಿದ ದೂರಿನಲ್ಲಿ ತಾನೇ ಹವಲಾ ಟ್ರಾನ್ಸಕ್ಷನ್ ಮಾಡಿರುವ ಬಗ್ಗೆ ಪೂಜಾರಿ ಒಪ್ಪಿಕೊಂಡಿದ್ದಾರೆ. ಮುಂಬೈನಲ್ಲಿ ವ್ಯವಹಾರ ಮಾಡಿದ ಪೂಜಾರಿಗೆ ಇದರ ಸುಳಿವು ಇದೆ. ಅಲ್ಲಿ ಮನಿ ಆಕ್ಟಿವಿಟಿಗಳ ಹಬ್ ಆಗಿರುವ ಪ್ರದೇಶವಾಗಿದೆ. ಹವಾಲಾ ದಂಧೆಕೋರರ ಜೊತೆಗೆ ಸಂಪರ್ಕ ಇರುವ ಸಾಧ್ಯತೆ ಇದೆ. ಈ ಬಗ್ಗೆ ಆಳವಾದ ಸೂಕ್ತ ತನಿಖೆಯ ಅವಶ್ಯಕತೆ ಇದೆ ಎಂದೇ ಶರ್ಮಾ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment