ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಏಳು ಕೋಟಿ ಹಣ ಪಡೆದ ಚೈತ್ರಾ ಕುಂದಾಪುರ ಈಗ ಪೊಲೀಸರ ವಶದಲ್ಲಿದ್ದಾರೆ. ಮುಂದಿನ 10 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ಚೈತ್ರಾರನ್ನು ಒಪ್ಪಿಸಲಾಗಿದೆ. ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಈ ಸಂಬಂಧ ಆದೇಶ ನೀಡಿದೆ.
ಇನ್ನು ಚೈತ್ರಾ ಕುಂದಾಪುರ ವಶಕ್ಕೆ ಪಡೆದ ಬಳಿಕ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಈ ವೇಳೆ ಜಡ್ಜ್ ಮುಂದೆ ಮಾತನಾಡಿದ ಆಕೆ, ನನಗೆ ಉಡುಪಿ ಪೊಲೀಸರು ಬಂಧಿಸುವಾಗ ಕಿರಿಕಿರಿ ಮಾಡಿದ್ದಾರೆ, ಸಿಸಿಬಿ ಪೊಲೀಸರು ಕೈ ಹಿಡಿದು ಎಳೆದಾಡಿದ್ದಾರೆ. ನನ್ನ ತಾಯಿಯ ಜೊತೆಗೆ ಮಾತನಾಡುವುದಕ್ಕೂ ಅವಕಾಶ ನೀಡಲಿಲ್ಲ. ನನ್ನ ಮೇಲೆ ಅಂತಹ ಯಾವ ಕೇಸ್ ಇದೆ ಎಂದು ನನಗೆ ಗೊತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.
ಇನ್ನು ಆರೋಪಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಅವರ ಮೇಲೆ ದಾಖಲಾದ ದೂರಿನ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಆದರೆ ದೂರು ಕೊಟ್ಟವರ ಮಾಹಿತಿ ನೀಡಿಲ್ಲ. ಇನ್ನು ವಕೀಲರ ಜೊತೆಗೆ ಮಾತನಾಡಲು, ಕೋರ್ಟ್ ಆವರಣದಲ್ಲಿಯೇ ಸಮಯಾವಕಾಶ ನೀಡಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್