MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿದ ಚೈತ್ರಾ ಕುಂದಾಪುರ : ಈಗ ಪೊಲೀಸರ ಅತಿಥಿ

1 Min Read

 

ಉಡುಪಿ: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಚೈತ್ರಾರನ್ನು ಪೊಲೀಸ್ ಅರೆಸ್ಟ್ ಮಾಡಿದ್ದಾರೆ.

ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ, ಇಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ತಗಲಾಕಿಕೊಂಡಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸರು, ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಕಡೆಗು ಬಂಧಿಸಿದ್ದಾರೆ. ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ವಂಚನೆಗೊಳಗಾದವರು. ಉದ್ಯಮಿಯ ಮುಗ್ಧತೆ ಯನ್ನು ಬಳಸಿಕೊಂಡು ಮಹಾವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರ ಕುಂದಾಪುರ, ಟಿಕೆಟ್ ಕೊಡಿಸುವುದಾಗಿ ನಾಲ್ಕೈದು ಜನರ ತಂಡದಿಂದ ಬೃಹನ್ನಾಟಕವಾಡಿದ್ದರು. ಕೇಂದ್ರದ ನಾಯಕರು, ಆರೆಸ್ಸೆಸ್ ಪ್ರಮುಖರ ಹೆಸರಿನಲ್ಲಿ ಪಂಗನಾಮ ಹಾಕಿದ್ದಾರೆ. ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಸೃಷ್ಟಿ ಮಾಡಿದ್ದ ಚೈತ್ರ ಅಂಡ್ ಟೀಮ್, ಸುಮಾರು ಮೂರು ಹಂತದಲ್ಲಿ ಏಳು ಕೋಟಿ ರೂಪಾಯಿ ಪೀಕಿದ್ದಾರೆ. ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕ ಮಾಡಿಕೊಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ.

ವಂಚನೆ ಪ್ರಕರಣದಲ್ಲಿ ಈವರೆಗೆ ಒಟ್ಟು ನಾಲ್ವರನ್ನ ವಶಕ್ಕೆ ಪಡೆದಿದ್ದಾರೆ. ಚೈತ್ರಾ ಕುಂದಾಪುರ, ಗಗನ್ ಕಡೂರು,
ಶ್ರೀಕಾಂತ ನಾಯಕ್, ಪೊಲೀಸ್ ವಶದಲ್ಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *