ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಐದು ಕೋಟಿ ವಂಚನೆ ಮಾಡಿರುವ ಚೈತ್ರಾ ಅಂಡ್ ಗ್ಯಾಂಗ್ ತನಿಖೆಯಿಂದ ತಪ್ಪಿಸಿಕೊಳ್ಳುವುದಕ್ಕೆ ತರಹೇವಾರಿ ಡ್ರಾಮಾ ಆಡ್ತಾ ಇದ್ದಾರೆ. ಅದರಲ್ಲಿ ಕಳೆದ ಮೂರು ದಿನಗಳ ಹಿಂದೆ ಪಿಟ್ಸ್ ಬಂದವರಂತೆ ನಾಟಕವಾಡಿದ್ದು ಕೂಡ ಒಂದು. ಬಾಯಲ್ಲಿ ನೊರೆ ಬಂದ ತಕ್ಷಣ ಅಧಿಕಾರಿಗಳು ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾಳೆ.
ಚೈತ್ರಾಳಿಗೆ ಚಿಕಿತ್ಸೆ ನೀಡಿದ ವೈದ್ಯರು ಹೇಳಿದ ಪ್ರಕಾರ, ಚೈತ್ರಾಗೆ ಯಾವುದೇ ರೀತಿಯ ಪಿಟ್ಸ್ ಕಂಡು ಬಂದಿಲ್ಲವಂತೆ. ದಿವ್ಯ ಪ್ರಕಾಶ್ ಪ್ರತಿಕ್ರಿಯೆ ನೀಡಿ, ಚೈತ್ರಾ ಕುಂದಾಪುರಗೆ ಪಿಟ್ಸ್ ಏನು ಕಂಡು ಬಂದಿಲ್ಲ. ಮೊದಲ ಬಾರಿಗೆ ಇಸಿಜಿ ಮಾಡಿಸಿದಾಗ ಸ್ವಲ್ಪ ವ್ಯತ್ಯಾಸ ಕಂಡು ಬಂದಿತ್ತು. 24 ಗಂಟೆ ಬಿಟ್ಟು ಮತ್ತೆ ಮಾಡಿಸಿದಾಗ ಅಂಥದ್ದೇನು ವ್ಯತ್ಯಾಸ ಕಂಡು ಬರಲಿಲ್ಲ. ಚೈತ್ರಾ ಕುಂದಾಪುರ ಆರಾಮವಾಗಿದ್ದಾರೆ. ಅವರ ಆರೋಗ್ಯದ ಸ್ಥಿತಿ ಸರಿಯಾಗಿಯೇ ಇದೆ. ನ್ಯೂರಾಲಾಜಿಸ್ಟ್ ಮಾತ್ರೆಗಳನ್ನು ಕೊಟ್ಟಿದ್ದಾರೆ ಎಂದಿದ್ದಾರೆ.
ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರಿಗೆ ತಗಲಾಕಿಕೊಂಡ ನಂತರ ಹೈಡ್ರಾಮಾಗಳನ್ನು ಶುರು ಮಾಡಿದ್ದಾರೆ. ವಿಚಾರಣೆಯಿಂದ ತಪ್ಪಿಸಿಕೊಳ್ಳುವ ನಾಟಕವಾಡುತ್ತಿದ್ದಾಳೆ. ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮತ್ತೆ ಸಿಸಿಬಿ ಪೊಲೀಸರು ನಾಳೆಯಿಂದ ತನಿಖೆ ಆರಂಭಿಸಲಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್