ಶಿವಮೊಗ್ಗ: ನಿನ್ನೆ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಇಂದು ಮಾತನಾಡಿದ್ದಾರೆ. ಹಿಜಾಬ್ ವಿರುದ್ಧ ಹರ್ಷ ಗಲಾಟೆ ಮಾಡುತ್ತಿದ್ದ ಎನ್ನುವುದಕ್ಕಾಗಿ ಆತನನ್ನ ಕೊಂದಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ಸತ್ಯಾಸತ್ಯತೆ ಏನು ಅಂತ ಗೊತ್ತಾಗಲೇ ಬೇಕು ಎಂದು ಒತ್ತಾಯಿಸಿದ್ದಾರೆ.
ಇಂತಹ ಘಟನೆಗಳನ್ನು ಸರ್ಕಾರ ತಡೆಯಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಸರಿಯಾದ ಶಿಕ್ಷೆ ವಿಧಿಸಬೇಕು. ಇಲ್ಲವಾದರೆ ಮುಂದೆಯೂ ಇಂಥ ಘಟನೆಗಳು ಮರುಕಳಿಸುತ್ತವೆ. ಇಂದು ಶಾಂತವಾಗಿದೆ ಎಂದು ನಾವೂ ಖುಷಿ ಪಡಬೇಕೋ ಅಥವಾ ಬೇಸರ ಪಟ್ಟುಕೊಳ್ಳಬೇಕೋ ತಿಳಿಯುತ್ತಿಲ್ಲ.
ಹರ್ಷನ ಹತ್ಯೆ 6 ತಿಂಗಳಾದರೂ ಮರೆಯಾಗುವುದಿಲ್ಲ. ಆತನ ಸಾವಿಗೆ ಪರಿಹಾರ ಕೊಡುತ್ತೇವೆಂದರೆ ಮಾತ್ರ ಇದನ್ನ ಮುಕ್ತಾಯಗೊಳಿಸಬಹುದು. ಇಲ್ಲವಾದರೆ 3-4 ತಿಂಗಳಿಗೊಮ್ಮೆ ಈ ರೀತಿಯ ಹತ್ಯೆ ಮರುಕಳಿಸುತ್ತಿರುತ್ತವೆ. ಗೃಹ ಸಚಿವರ ತವರು ಜಿಲ್ಲೆಯಲ್ಲೆ ಈ ರೀತಿ ಆಗಿರುವುದು ದುರದೃಷ್ಟಕರ. ನೀವೂ ನಮ್ಮನ್ನ ರಕ್ಷಣೆ ಮಾಡ್ತೀರಾ ಅಥವಾ ನಮ್ಮನ್ನು ನಾವೂ ರಕ್ಷಣೆ ಮಾಡಿಕೊಳ್ಳಬೇಕಾ ಎಂದು ಪ್ರಶ್ನಿಸಿದ್ದಾರೆ.
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…
ಚಿತ್ರದುರ್ಗ. ಏ.16:ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಯೂನಿಯನ್ ಪಾರ್ಕ್ ಬಳಿ, ಪುಟ್‍ಪಾತ್ ಮೇಲೆ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ.…