ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.17 : ನಗರದಲ್ಲಿ ಸರ್ಕಾರಿ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು(ಭಾನುವಾರ) ಜರುಗಿದೆ.ನಗರದ ತಾಲೂಕು ಕಚೇರಿಯಲ್ಲಿ ಭೂಮಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಈಗ ಚುನಾವಣೆ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರುಲಿಂಗಪ್ಪ(52) ಎನ್ನುವ ಸರ್ಕಾರಿ ನೌಕರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಮಧ್ಯಾಹ್ನ ವಾಲ್ಮೀಕಿ ನಗರದ ಮನೆಯಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪಿಎಸ್ ಐ ಶಿವರಾಜ್ ಹಾಗೂ ಕಸಬಾ ಕಂದಾಯ ನಿರೀಕ್ಷಕ ಲಿಂಗೇಗೌಡ ಭೇಟಿ ನೀಡಿದ್ದು ಪೋಲಿಸ್ ತನಿಖೆಯಿಂದ ಆತ್ಮಹತ್ಯೆಯ ನಿಖರವಾದ ಮಾಹಿತಿ ತಿಳಿಯಲಿದೆ.
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















