ಸುದ್ದಿಒನ್, ಚಳ್ಳಕೆರೆ, ನವೆಂಬರ್. 10 : ಚಲಿಸುತ್ತಿದ್ದ ಖಾಸಗಿ ಬಸ್, ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಬುಡ್ನಹಟ್ಟಿ ಬಳಿಯ ಬಾಹುಬಲಿ ಫ್ಯಾಮಿಲಿ ಡಾಬಾ ಸಮೀಪದ ರಾಷ್ಟ್ರೀಯ ಹೆದ್ದಾರಿ 150ಎನಲ್ಲಿ ನಡೆದಿದೆ.
ಬಸ್ಸಿನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬಸ್ಸಿನಲ್ಲಿ ಪಾರಿವಾಳ ತುಂಬಿದ್ದ ಬಾಕ್ಸ್ ಅನ್ನು ಚಾಲಕನ ಪಕ್ಕದಲ್ಲಿಟ್ಟಿದ್ದರು. ಇದ್ದಕ್ಕಿದ್ದಂತೆ ಪಾರಿವಾಳಗಳು ಹೊರಗೆ ಬರಲು ಪ್ರಯತ್ನಿಸಿವೆ. ಅವುಗಳನ್ನು ಹಿಡಿಯಲು ಹೋದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಈ ಘಟನೆಯಲ್ಲಿ ಹಲವಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಳಕಾಲ್ಮೂರಿನಿಂದ ಚಳ್ಳಕೆರೆ ಕಡೆಗೆ ಬರುವಾಗ ಈ ಘಟನೆ ನಡೆದಿದೆ. ಮಂಜುನಾಥ ಖಾಸಗಿ ಬಸ್ ಎಂದು ಗುರುತಿಸಲಾಗಿದೆ. ಬಸ್ ಚಾಲಕನ ಅಜಾಗರೂಕತೆಯೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










