Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಳ್ಳಕೆರೆ | ಭೀಕರ ಅಪಘಾತ,  ಇಬ್ಬರು ಸ್ಥಳದಲ್ಲಿ ಸಾವು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಜುಲೈ. 15 : ತಾಲ್ಲೂಕಿನ ತಳಕು ಸಮೀಪ ರಾಷ್ಟ್ರೀಯ ಹೆದ್ದಾರಿ ಹೊಸಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದೆ.

ಬಳ್ಳಾರಿ ಮೂಲದ ಗೋಪಿನಾಥ (55) ಪತ್ನಿ ಲಲಿತಾಮ್ಮ (45) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇನ್ನೂ ಕಾರಿನಲ್ಲಿದ್ದ  ಗೋಪಿನಾಥ, ಮಕ್ಕಳಾದ ಶ್ರೀನಿವಾಸ್, ಶ್ರೇಯಾ ಹಾಗೂ ಚಾಲಕ ಸುರೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಗೆ ದಾಖಲಿಸಲಾಗಿದೆ.

ಮೃತ ದಂಪತಿಗಳು ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಇನ್ನೋವ ವಾಹನ ಮುಂಜಾನೇ 4.30 ರ ಸಮಯದಲ್ಲಿ ತಳಕು ಸಮೀಪದ ರಾಷ್ಟ್ರೀಯ ಹೆದ್ದಾರಿಯ ಹೊಸಹಳ್ಳಿ ಗೇಟ್ ಸಮೀಪ ತಡೆಗೋಡೆಗೆ ಡಿಕ್ಕಿಯಾದ  ಪರಿಣಾಮವಾಗಿ ಪತಿ ಹಾಗೂ ಪತ್ನಿ ಸ್ಥಳದಲ್ಲಿ ಸಾವನಪ್ಪಿದ್ದಾರೆ. ತಡೆಗೋಡೆಗೆ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.

ಅಪಘಾತ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ ಪಿ ಟಿ.ಬಿ.ರಾಜಣ್ಣ, ತುಳುಕು ಪಿಎಸ್ಐ  ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರೀಶಿಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...