Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಈಜುಲು ಹೋದ ಯುವಕ ಶವವಾಗಿ ಪತ್ತೆ….!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 05 : ಕಲ್ಲು ಕ್ವಾರೆಯಲ್ಲಿ ನಿಂತಿದ್ದ ನೀರಿನಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತಾಲೂಕಿನ ಸೋಮಗುದ್ದು ಸಮೀಪದ ಕ್ವಾರೆಯಲ್ಲಿ ನಡೆದಿದೆ.

ಸೋಮುಗುದ್ದು ಹಾಗೂ ಅರಣ್ಯ ಪ್ರದೇಶದ ಮಧ್ಯ ಇರುವ ಕಲ್ಲಿನ ಕ್ವಾರೆಯ ನೀರಿನಲ್ಲಿ ಈಜಲು ಹೋಗಿದ್ದ ಸೋಮುಗುದ್ದ ಗ್ರಾಮದ 22 ವರ್ಷದ ನವೀನ್ ಮೃತ ದುರ್ದೈವಿಯಾಗಿದ್ದಾನೆ.
ತನ್ನ ತಂದೆಯ ಜೊತೆಗೆ ನವೀನ್ ಕ್ವಾರೆಗೆ ತೆರಳಿದ್ದ. ತಂದೆ ಬಂಡೆ ಒಡೆಯುವ ಕೆಲಸದಲ್ಲಿ ತೊಡಗಿದಂತಹ ಸಮಯದಲ್ಲಿ ನವೀನ್ ಈಜಲು ಹೋಗಿ ನವೀನ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ. ನವೀನ್ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಘಟನಾ ಸ್ಥಳಕ್ಕೆ 112 ಹೊಯ್ಸಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಶವವನ್ನು ಅಗ್ನಿಶಾಮಕ ದಳ ಸಹಕಾರದಿಂದ ಹೊರ ತೆಗೆದಿದ್ದಾರೆ..
ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now