ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 11 : ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸಿನ ಬಳಿ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರನಾದ ಕೋನಿಗರಹಳ್ಳಿ ಗ್ರಾಮದ ಮಹಾಂತೇಶ ಎಂಬುವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪತ್ನಿಯೊಂದಿಗೆ ಕೋನಿಗರಹಳ್ಳಿ ಗ್ರಾಮದಿಂದ ಹೆಗ್ಗೆರೆ ಗ್ರಾಮಕ್ಕೆ ತೆರಳುವಾಗ ಈ ಘಟನೆ ನಡೆದಿದ್ದು ಪತ್ನಿ ಪ್ರೇಮಾ ಅವರಿಗೆ ಕೈಗೆ ತೀವ್ರವಾಗಿ ಪೆಟ್ಟಾಗಿದೆ. ಕಾರಿನಲ್ಲಿ ಇದ್ದ ಮೂವರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಇವರನ್ನು ಹತ್ತಿರದ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಚಳ್ಳಕೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












