ಚಳ್ಳಕೆರೆ | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ

suddionenews
1 Min Read

ಚಿತ್ರದುರ್ಗ. ನ.15: ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿ ಚಿಕ್ಕಹಳ್ಳಿ ಎಸ್.ಸಿ.ಕಾಲೋನಿ ಗ್ರಾಮಕ್ಕೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಚಿಕ್ಕಹಳ್ಳಿ ಎಸ್.ಸಿ.ಕಾಲೋನಿಯಲ್ಲಿ 7 ಎಎವೈ, 93 ಪಿಹೆಚ್‍ಹೆಚ್ ಸೇರಿದಂತೆ ಒಟ್ಟು 100 ಪಡಿತರ ಚೀಟಿಗಳಿವೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ, ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ.

ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಯಾವುದೇ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗಧಿತ ಫಾರಂ “ಎ” ಅನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಅಥವಾ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ  ಪಡೆಯಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *