Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಎಎಸ್ ಐ ಮಂಜುನಾಥ ಸಾವು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 30 : ದಾರಿಗೆ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಹಾಯಕ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಬೈಕ್​ ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದಾರೆ.

ಮೃತರನ್ನು ಮಂಜುನಾಥ್​ (50) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ.

ಮಂಜುನಾಥ್​​ ಅವರು ಪರಶುರಾಮಪುರ ಠಾಣೆಯಲ್ಲಿ ಎಎಸ್​ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ಹಿಂತಿರುಗುವಾಗ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಈ ವೇಳೆ ಮಂಜುನಾಥ್​ ಸ್ಥಳದಲ್ಲೇ ಸಾವಿಗಿಡಾಗಿದ್ದಾರೆ.

ಮಂಜುನಾಥ್​ ಅವರ ಜೊತೆ ಇದ್ದ ಪೊಲೀಸ್​ ಕಾನ್ಸ್‌ಟೇಬಲ್ ಸೂರ್ಯಪ್ರಭಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳು ಸೂರ್ಯಪ್ರಭಾ ಅವರು ಮೃತ ಮಂಜುನಾಥ ಸಹೋದರಿ. ಮಂಜುನಾಥ್​ ಅವರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

ಅಪಘಾತ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now