ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 28 :ಖಾಸಗಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತದಲ್ಲಿ ಓರ್ವ ಮಹಿಳೆ ಸಾವನಪ್ಪಿದ್ದು, ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಮಾಮಪುರ ಸಮೀಪ ನಡೆದಿದೆ.
ವಿಠಲ ನಗರದಿಂದ ಇಮಾಮಪುರ ಕಡೆಗೆ ಹೊರಟಿದ್ದ ಆಟೋಗೆ ಖಾಸಗಿ ಬಸ್ಸು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಈ ವಿಠಲ ನಗರದ ವರ್ಷದ ಗಂಗಮ್ಮ ನವರಿಗೆ ತಲೆ ಹಾಗೂ ಇತರೆ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆಟೋ ಚಾಲಕ ವಿಠಲನಗರದ ಈಶ್ವರಪ್ಪನಿಗೆ ತಲೆ ಹಾಗೂ ಇತರ ಭಾಗಗಳಿಗೆ ತೀವ್ರವಾದ ಗಾಯಗಳಾಗಿದ್ದು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿ ವೈ ಎಸ್. ಪಿ. ಟಿ. ಬಿ.ರಾಜಣ್ಣ ಹಾಗೂ ಪಿ. ಎಸ್. ಧರಪ್ಪ ಬಾಳಪ್ಪ ದೊಡ್ಡ ಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











