ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ,ಡಿಸೆಂಬರ್. 07 : ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ.
ತಾಲ್ಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.ಈ ಅಪಘಾತದಲ್ಲಿ ಬೈಕಿನಲ್ಲಿ ಚಲಿಸುತ್ತಿದ್ದ ಯುವಕರಾದ ಪ್ರಕಾಶ್ (30 ವರ್ಷ)ಹಾಗೂ ಮಧು (35 ವರ್ಷ) ಮೃತ ದುರ್ದೈವಿಗಳು. ಶನಿವಾರ ರಾತ್ರಿ 9 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಚಳ್ಳಕೆರೆ ನಗರಕ್ಕೆ ಬರುವಾಗ ಈ ಘಟನೆ ನಡೆದಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.














