ಸುದ್ದಿಒನ್, ಚಳ್ಳಕೆರೆ, ಸೆಪ್ಟಂಬರ್ 01 : ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಂಜುನಾಥ (28 ವರ್ಷ) ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆ
ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಳಿ ಗುರುವಾರ ಮಧ್ಯಾನ್ಹ ನಡೆದಿದೆ.
ಘಟನೆ ವಿವರ : ನಾರಾಯಣಪುರ ಗ್ರಾಮದ ವಾಸಿ ಮಂಜುನಾಥ(28)ಯಲಗಟ್ಟ ಗ್ರಾಮಕ್ಕೆ ಹೋಗಿ ವಾಪಸ್ಸು ಬರುವಾಗ ಎದುರುಗಡೆ ವೇಗವಾಗಿ ಬಂದ ಮತ್ತೊಂದು ಬೈಕ್ ಗೆ ಡಿಕ್ಕಿಯಾದ ಪರಿಣಾಮವಾಗಿ ಈತ ಗಂಭೀರವಾಗಿ ಗಾಯಗೊಂಡು
ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ
ಸಂಜೆ ಸಮಯದಲ್ಲಿ ಮಂಜುನಾಥ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.
ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿರುತ್ತದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












