ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಸೆಪ್ಟೆಂಬರ್. 01 : ತಾಲೂಕಿನ ಸಾಣೀಕೆರೆ ಗ್ರಾಪಂ ವ್ಯಾಪ್ತಿಯ ಹೊಟ್ಟಜ್ಜನ ಕಪಿಲೆಯಲ್ಲಿ ಗ್ರಾಮದಲ್ಲಿ ಹಾಡು ಹಗಲೆ ಇಬ್ಬರು ಕಳ್ಳರು ಮನೆಯ ಬೀಗ ಮುರಿದು ಒಳ ನುಗ್ಗಿ ಒಡವೆಗಳನ್ನು ಕದ್ದು ಪರಾರಿಯಾದ ಘಟನೆ ಇಂದು ನಡೆದಿದೆ.
ಗ್ರಾಮದ ರೈತ ಶ್ರೀನಿವಾಸ್ ಇಂದು ಮಧ್ಯಾಹ್ನ ಮನೆಗೆ ಬೀಗ ಹಾಕಿಕೊಂಡು ಜಮೀನಿಗೆ ಹೋಗಿ ಒಂದು ಗಂಟೆಯೊಳಗೆ ಮರಳಿ ಮನೆಗೆ ಬರುವಷ್ಟರಲ್ಲಿ ಮನೆ ಬೀಗ ಹೊಡೆದು ಬಿರುವಿನ ಲಾಕ್ ಮುರಿದು ಬೀರುವಿನಲ್ಲಿದ್ದ ಚಿನ್ನದ ಸರ ಹಾಗೂ ಕಿವಿಯೋಲೆಗಳು ಕಳವಾಗಿದೆ.
ಮನೆಯ ಕಳ್ಳತನ ಕುರಿತು ಶ್ರೀನಿವಾಸ್ ಗ್ರಾಮಸ್ಥರ ಬಳಿ ಮಾಹಿತಿ ತಿಳಿಸಿದ್ದಾರೆ. ಗ್ರಾಮಸ್ಥರು ಒಂದು ಬೈಕ್
ನಲ್ಲಿ ಇಬ್ಬರು ಅಪರಿಚಿತರು ಹೆಲ್ಲ್ಮೇಟ್ ಹಾಕಿಕೊಂಡು ಸುತ್ತಾಡುತ್ತಿದ್ದರು ಎಂದು ಹೇಳಿದ್ದಾರೆ. ಕಳ್ಳತನ ನಡೆದಿರುವ ಬಗ್ಗೆ ಸಾಣೀಕೆರೆ ಪೊಲೀಸರಿಗೆ ತಿಳಿಸಿದ್ದರಿಂದ ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ ಪಿ ಟಿ.ಬಿ.ರಾಜಣ್ಣ ಬೇಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











