Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್, 42 ಪ್ರಯಾಣಿಕರು ಪವಾಡಸದೃಶ ಪಾರು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಳ್ಳಕೆರೆ, ನವೆಂಬರ್. 17 : ಚಾಲಕನಿಗೆ ನಿದ್ದೆಯ ಮಂಪರು ಆವರಿಸಿದ ಪರಿಣಾಮ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ರಭಸವಾಗಿ ಡಿಕ್ಕಿ ಹೊಡೆದ ಭೀಕರ ಘಟನೆ ಚಳ್ಳಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ. ಬಸ್ಸಿನಲ್ಲಿದ್ದ 42 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾರೆ.

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಈ ಬಸ್ ಸುರಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಹೊಟಜ್ಜನ ಕಪಿಲೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ತಿರುವಿನ ಬಳಿ ಬರುತ್ತಿದ್ದಂತೆ ಚಾಲಕನಿಗೆ ನಿದ್ದೆ ಆವರಿಸಿದೆ ಎನ್ನಲಾಗಿದೆ. ಪರಿಣಾಮ ನಿಯಂತ್ರಣ ಕಳೆದುಕೊಂಡ ಬಸ್, ನೇರವಾಗಿ ಡಿವೈಡರ್‌ಗೆ ನುಗ್ಗಿದೆ.

ಡಿಕ್ಕಿಯ ರಭಸಕ್ಕೆ ಸುಮಾರು 60 ಮೀಟರ್ ದೂರದವರೆಗೆ ರಸ್ತೆ ಮಧ್ಯದ ಕಬ್ಬಿಣದ ರಿಫ್ಲೆಕ್ಟರ್ ಪ್ಲೇಟ್‌ಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಅಲ್ಲದೆ, ತಿರುವಿನ ಮುನ್ಸೂಚನೆಗಾಗಿ ಅಳವಡಿಸಿದ್ದ ಸೋಲಾರ್ ಸಿಗ್ನಲ್ ಲೈಟ್ ಕಂಬವೂ ಮುರಿದು ಬಿದ್ದಿದೆ. ಅಪಘಾತದಲ್ಲಿ ಬಸ್ಸಿನ ಮುಂಭಾಗದ ನಂಬರ್ ಪ್ಲೇಟ್, ಇಂಜಿನ್ ಹಾಗೂ ಟೈರ್‌ಗಳು ಸಂಪೂರ್ಣ ಜಖಂಗೊಂಡಿದ್ದು, ಬ್ಯಾಟರಿಗಳು ಚಲ್ಲಾಪಿಲ್ಲಿಯಾಗಿವೆ. ಇಂಜಿನ್ ಆಯಿಲ್ ರಸ್ತೆಯ ತುಂಬಾ ಹರಡಿಕೊಂಡಿತ್ತು. ಘಟನೆಯ ಬಳಿಕ ಬಸ್ಸಿನಲ್ಲಿದ್ದ ಕಂಗಾಲಾದ ಪ್ರಯಾಣಿಕರನ್ನು ಮತ್ತೊಂದು ಸಾರಿಗೆ ಬಸ್ಸಿಗೆ ಹತ್ತಿಸಿ ಸುರಕ್ಷಿತವಾಗಿ ತಮ್ಮ ಪ್ರಯಾಣ ಮುಂದುವರಿಸಲು ವ್ಯವಸ್ಥೆ ಮಾಡಲಾಯಿತು.

ವಿಷಯ ತಿಳಿಯುತ್ತಿದ್ದಂತೆ ಚಳ್ಳಕೆರೆ ಪೊಲೀಸರು ಹಾಗೂ ಹೈವೇ ಪೆಟ್ರೋಲಿಂಗ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ವಾಹನವನ್ನು ತೆರವುಗೊಳಿಸಿ ರಸ್ತೆ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡರು. ಈ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಪ್ರಾಣಹಾನಿಯೊಂದು ತಪ್ಪಿದಂತಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now