ಸುದ್ದಿಒನ್, ಚಳ್ಳಕೆರೆ : ಸಾಲಬಾಧೆ ತಾಳಲಾರದೆ ಉದ್ಯಮಿಯೊಬ್ಬರು ತನ್ನ ತಂದೆ ತಾಯಿಯ ಸಮಾಧಿಯ ಮೇಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ನಗರದ ವೀರಶೈವ ರುದ್ರಭೂಮಿಯಲ್ಲೇ ಆತ್ಮಹತ್ಯೆಗೆ ಶರಣಾದ ವಾಣಿಜ್ಯೋದ್ಯಮಿ ಸುರೇಶ್(50) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ನಗರದಲ್ಲಿ ಎಂಆರ್ ಎಫ್ ಆಟೋಮೊಬೈಲ್ ಶೋ ರೂಮ್ ಹೊಂದಿದ್ದ ಸುರೇಶ್ ಆಟೋ ಮೊಬೈಲ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದರು.
ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















